Times of Deenabandhu
  • Home
  • ಜಿಲ್ಲೆ
  • ಬದುಕಿನಲ್ಲಿ ಉತ್ತಮ‌ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ ಸಾಹಿತ್ಯಕ್ಕಿದೆ – ಸಾಹಿತಿ ರವಿ ಸಸಿತೋಟ ಅಭಿಪ್ರಾಯಪಟ್ಟರು.
ಜಿಲ್ಲೆ ಶಿವಮೊಗ್ಗ

ಬದುಕಿನಲ್ಲಿ ಉತ್ತಮ‌ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ ಸಾಹಿತ್ಯಕ್ಕಿದೆ – ಸಾಹಿತಿ ರವಿ ಸಸಿತೋಟ ಅಭಿಪ್ರಾಯಪಟ್ಟರು.

ಶಿವಮೊಗ್ಗ ಡಿ 13. ನಮ್ಮ ಕನ್ನಡ ಸಾಹಿತ್ಯದಲ್ಲಿ ಕವಿಗಳು, ಕಥೆಗಾರರು ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಅಂತಹ ಕೃತಿಗಳನ್ನು ಓದುವ ಹವ್ಯಾಸವನ್ನು ನಮ್ಮ ಮಕ್ಕಳು ರೂಡಿಸಿಕೊಳ್ಳಬೇಕಿದ್ದು ಈ ಮೂಲಕ ನಮ್ಮ  ಬದುಕಿನಲ್ಲಿ ಉತ್ತಮ‌ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿ ಸಾಹಿತ್ಯಕ್ಕಿದೆ ಎಂದು ಸಾಹಿತಿ ರವಿ ಸಸಿತೋಟ ಅಭಿಪ್ರಾಯಪಟ್ಟರು.

ಇಂದು ನಗರದ ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ‌ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಅನನ್ಯ ಶಿಕ್ಷಣ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗಾಗಿ ಶಾಲಾ, ಕಾಲೇಜು ಅಂಗಳದಲ್ಲಿ ಕಥೆ, ಕವನ, ಪ್ರಬಂಧ ರಚನಾ ಕಮ್ಮಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಓದುವ ಹವ್ಯಾಸ ಬದುಕಿನ ರೀತಿ ನೀತಿಗಳನ್ನ ಬದಲಾಯಿಸುವ ಶಕ್ತಿ ಹೊಂದಿದ್ದು ನಾವು ಓದಿದ ಪ್ರತಿ ಅಕ್ಷರವು ಒಂದಲ್ಲ ಒಂದು ದಿನ ಫಲ ನೀಡುತ್ತದೆ. ನಮ್ಮಲ್ಲಿನ ಬದುಕಿನ ಘಟನೆಗಳು, ಹೊಸ ವಿಚಾರಗಳನ್ನು ಬರವಣಿಗೆಯಲ್ಲಿ ಹಿಡಿದಿಡುವ ಪ್ರಯತ್ನವನ್ನು ನಮ್ಮ ವಿದ್ಯಾರ್ಥಿ ಸಮೂಹ ಪ್ರಯತ್ನಿಸಲಿಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅನನ್ಯ ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ ಆರ್ ಗಿರೀಶ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷರಾದ ಡಿ ಮಂಜುನಾಥ, ಸಹ್ಯಾದ್ರಿ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥರಾದ ಡಾ.ಪ್ರಕಾಶ್ ಮರಗನಳ್ಳಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾದ ಡಾ.ಕಲೀಮ್ ಉಲ್ಲಾ, ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾದ ಡಾ.ಅನಿತಾ ಹೆಗ್ಗೋಡು, ಜಿಲ್ಲಾ ಕನ್ನಡ ‌ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಕಾರ್ಯದರ್ಶಿ ಡಿ.ಗಣೇಶ್, ಸಹ ಕಾರ್ಯದರ್ಶಿ ಕೆ.ಎಸ್ ಅನುರಾಧ ಮತ್ತಿತರರು ಭಾಗವಹಿಸಿದ್ದರು.

Related posts

ಆಹಾರ, ತರಕಾರಿ ಸುಗಮ ಸರಬರಾಜಿಗೆ ವ್ಯವಸ್ಥೆ- ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Times fo Deenabandhu

ಎಪಿಎಂಸಿ ವತಿಯಿಂದ ಆಹಾರ ಪದಾರ್ಥಗಳುಳ್ಳ ಕಿಟ್ ವಿತರಣೆ

Times fo Deenabandhu

ಕೊರೊನಾ ನಿಯಂತ್ರಿಸಲು ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ನಡೆಯೋಣ

Times fo Deenabandhu