Times of Deenabandhu
  • Home
  • ಜಿಲ್ಲೆ
  • ಪಿಡಿಒಗಳಿಗೆ ಕಾರ್ಯಾಗಾರ ಗ್ರಾಮೀಣ ಸಮಸ್ಯೆಗಳನ್ನು ನೇರವಾಗಿ ಗಮನಕ್ಕೆ ತನ್ನಿ: ಸಚಿವ ಕೆ.ಎಸ್.ಈಶ್ವರಪ್ಪ
ಜಿಲ್ಲೆ ಶಿವಮೊಗ್ಗ

ಪಿಡಿಒಗಳಿಗೆ ಕಾರ್ಯಾಗಾರ ಗ್ರಾಮೀಣ ಸಮಸ್ಯೆಗಳನ್ನು ನೇರವಾಗಿ ಗಮನಕ್ಕೆ ತನ್ನಿ: ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಜನವರಿ 10   : ಗ್ರಾಮೀಣ ಪ್ರದೇಶಗಳಲ್ಲಿ ಯೋಜನೆಗಳ ಅನುಷ್ಟಾನದಲ್ಲಿನ ತೊಂದರೆಗಳ ಬಗ್ಗೆ ನೇರವಾಗಿ ತಮ್ಮ ಗಮನಕ್ಕೆ ತರುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಶುಕ್ರವಾರ ಶಿವಮೊಗ್ಗ ರಂಗಾಯಣ ಸಭಾಂಗಣದಲ್ಲಿ ಪಂಚಾಯತ್‍ರಾಜ್ ಅಧಿಕಾರಿಗಳಿಗೆ ಶುಕ್ರವಾರ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ರೈತರ ಅಭಿವೃದ್ಧಿಯಾದರೆ ಮಾತ್ರ ಹಳ್ಳಿಗಳ ಅಭಿವೃದ್ಧಿಯಾಗಲು ಸಾಧ್ಯ. ಹಳ್ಳಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುವುದು. ಗ್ರಾಮೀಣ ಅಭಿವೃದ್ಧಿ ಕಾರ್ಯಗಳ ಅನುಷ್ಟಾನದಲ್ಲಿ ಪಂಚಾಯತ್ ರಾಜ್ ಅಧಿಕಾರಿಗಳ ಪಾತ್ರ ಬಹಳ ಪ್ರಮುಖವಾದುದು. ಸರ್ಕಾರದ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಲ್ಲಿ ಪಿಡಿಒಗಳು ಕೊಂಡಿಯಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ನೇರವಾಗಿ ಜನಪ್ರತಿನಿಧಿಗಳ ಗಮನಕ್ಕೆ ತಂದು ಸರಿಪಡಿಸಬೇಕು. ಪಿಡಿಒಗಳ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು.

ವಿಲೇವಾರಿ ಘಟಕ ಪ್ರಾರಂಭಿಸಲು ಒತ್ತು: ಎಲ್ಲಾ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಜಿಲ್ಲೆಯ 271 ಗ್ರಾಮ ಪಂಚಾಯತ್‍ಗಳ ಪೈಕಿ ಕೇವಲ 19 ಪಂಚಾಯತ್ ವ್ಯಾಪ್ತಿಯಲ್ಲಿ ವಿಲೇವಾರಿ ಘಟಕಕ್ಕೆ ಜಮೀನು ಗುರುತಿಸಲಾಗಿದೆ. ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಜಮೀನು ಗುರುತಿಸಿ ಘಟಕವನ್ನು ಆದಷ್ಟು ಬೇಗನೆ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸದಸ್ಯ ವೀರಭದ್ರಪ್ಪ ಪೂಜಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಶ್ರೀರಾಮ್, ಕೇಶವ ಮೂರ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

 

 

 

Related posts

ಬಿಜೆಪಿ ಯುವ ಮೋರ್ಚಾದವತಿಯಿಂದ ಸ್ವಯಂ ರಕ್ತದಾನ ಶಿಬಿರ

Times fo Deenabandhu

ಔಷಧಿ ಅಂಗಡಿ ಹೊರತುಪಡಿಸಿ ಎಲ್ಲಾ ಅಂಗಡಿಯನ್ನು ಬಂದ್ ಮಾಡಬೇಕು:

ಅರಣ್ಯ ರಕ್ಷಣೆಯಿಂದ ಪರಿಸರ ಉಳಿಸಲು ಸಾಧ್ಯ: ಕುಮಾರ್

Times fo Deenabandhu