Times of Deenabandhu
  • Home
  • ಜಿಲ್ಲೆ
  • ಕುಷ್ಠರೋಗ ಜಾಗೃತಿ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸೋಣ: ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮಿ
ಜಿಲ್ಲೆ ಶಿವಮೊಗ್ಗ

ಕುಷ್ಠರೋಗ ಜಾಗೃತಿ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸೋಣ: ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮಿ

ಶಿವಮೊಗ್ಗ, ಜ. 30: ರಾಷ್ಟ್ರಾದ್ಯಂತ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆಯ ದಿನದ ಅಂಗವಾಗಿ ‘ಕುಷ್ಠ ರೋಗ ಮುಕ್ತ ದೇಶ ನನ್ನ ಕನಸು’ ಎಂಬ ಅವರ ಆಶಯದೊಂದಿಗೆ ಸ್ಪರ್ಶ್ ಕುಷ್ಠರೋಗ  ಅರಿವು ಆಂದೋಲನವನ್ನು ಆಚರಿಸಲಾಗುತ್ತಿದ್ದು, ಈ ರೋಗದ ನಿರ್ಮೂಲನೆಗೆ ಪ್ರತಿಯೊಬ್ಬರು ಕೈ ಜೋಡಿಸಿ ಕುಷ್ಠ ರೋಗ ನಿವಾರಿಸುವಲ್ಲಿ ಸಹಕರಿಸಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ. ಮಹಾಸ್ವಾಮಿ ಹೇಳಿದರು.

ಇಂದು ನಗರದ ಕೋರ್ಟ್ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕುಷ್ಠರೋಗ ನಿವಾರಣಾ ಕಾರ್ಯಕ್ರಮ ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ರಾಷ್ಟ್ರಿಯ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕುಷ್ಠರೋಗ ನಿವಾರಣೆಯಾಗುವಂತಹ ರೋಗ ಆರಂಭದ ದಿನಗಳಲ್ಲೆ ಪತ್ತೆ ಹಿಡಿದು. ಸೂಕ್ತ ಚಿಕಿತ್ಸೆ ನೀಡಿದಲ್ಲಿ ಕುಷ್ಠರೋಗ ಗುಣಮುಖವಾಗುತ್ತದೆ. ಕುಷ್ಠರೋಗವನ್ನು ಬಹುವಿಧ ಔಷಧಿ ಚಿಕಿತ್ಸೆಯಿಂದ ಸಂಪೂರ್ಣವಾಗಿ ಗುಣಪಡಿಸಬಹುದು. ಪ್ರಾರಂಭಿಕ ಹಂತದಲ್ಲಿ ಗುರ್ತಿಸಿ ಕ್ರಮಬದ್ಧ ಚಿಕಿತ್ಸೆ ಪಡೆದಲ್ಲಿ ಅಂಗವಿಕಲತೆ ತಡೆಗಟ್ಟಬಹುದು ಎಂದರು.

ಕಾರ್ಯಕ್ರಮದಲ್ಲಿ  ಸಹಾಯಕ ಪೊಲೀಸ್ ಅಧೀಕ್ಷಕ ಶೇಖರ್, ಹಿರಿಯ ಪ್ರಧಾನ ನ್ಯಾಯಾಧೀಶೆ ಶ್ರೀಮತಿ ಲಕ್ಷ್ಮೀ ನಾರಾಯಣ ಭಟ್,  ವಕೀಲರ ಸಂWದÀ ಅಧ್ಯಕ್ಷ  ಎನ್.ದೇವೆಂದ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಮೆಗ್ಗಾನ್ ಭೋಧನಾ ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ. ರಘುನಂದನ್, ಜಿಲ್ಲಾ ಕುಷ್ಠರೋಗ ನಿವಾರಣಾ ಕಾರ್ಯಕ್ರಮ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಮಂಜುನಾಥ್ ನಾಗಲೀಕರ್  ಹಾಗೂ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಪ್ರತಿಜ್ಞಾ ವಿಧಿ ಬೋಧಿಸಿದ ನಂತರ ಜಾಥವು ಕೋರ್ಟ್ ಆವರಣದಿಂದ ಪ್ರಾರಂಭವಾಗಿ ಮಹಾವೀರ್ ಸರ್ಕಲ್, ಗೋಪಿಸರ್ಕಲ್ ಮಾರ್ಗ ಮೂಲಕ ಐ.ಎಂ.ಎ ಹಾಲ್ ತಲುಪಿ ಸಂಪನ್ನಗೊಂಡಿತ್ತು.

 

 

 

 

 

Related posts

ನಾಳಿನ ಶಿವಮೊಗ್ಗ ಎಪಿಎಂಸಿ ಅಧ್ಯಕ್ಷ ಸ್ಥಾನ ಯಾರ ಪಾಲಿಗೆ?

ಚಿಕ್ಕಮಗಳೂರು: ಸೆಂಚುರಿ ಬಾರಿಸಿದ ಕೊರೊನಾ : ಜಿಲ್ಲೆಯಲ್ಲಿ ಇಂದು 6 ಜನರಿಗೆ ಸೋಂಕು ದೃಢ

ಯಕ್ಷೆತ್ಸವ-೨೦೨೦, ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Times fo Deenabandhu