Times of Deenabandhu
  • Home
  • ಪ್ರಧಾನ ಸುದ್ದಿ
  • ಬುಧವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ, ಅಕ್ರಮದಲ್ಲಿ ತೊಡಗಿದರೆ 5 ಲಕ್ಷ ದಂಡ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ ಶಿಕ್ಷಣ

ಬುಧವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ, ಅಕ್ರಮದಲ್ಲಿ ತೊಡಗಿದರೆ 5 ಲಕ್ಷ ದಂಡ

ಬೆಂಗಳೂರು: ರಾಜ್ಯಾದ್ಯಂತ ಮಾ. 4ರ ಬುಧವಾರದಿಂದ ಒಟ್ಟು 1,016 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಈ ಬಾರಿ ಒಟ್ಟು 6,80,049 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ವಿಜ್ಞಾನ ವಿಭಾಗದ ಒಟ್ಟು 2,16,930 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ 2,61,674 ಹಾಗೂ ಕಲಾ ವಿಭಾಗದ 2,01,445 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 3,41,618 ಬಾಲಕಿಯರು ಮತ್ತು 3,38,431 ಬಾಲಕರು ಪರೀಕ್ಷೆ ಬರೆಯಲಿದ್ದಾರೆ. ಮಾ. 23ರವರೆಗೆ ಪರೀಕ್ಷೆ ನಡೆಯಲಿದೆ.

ಈಗಾಗಲೇ ಪ್ರಶ್ನೆ ಪತ್ರಿಕೆಗಳನ್ನು ಆಯಾ ಜಿಲ್ಲೆಗಳ ಜಿಲ್ಲಾ ಖಜಾನೆಯಲ್ಲಿ ಅತ್ಯಂತ ಭದ್ರತೆಯ ನಡುವೆ ಶೇಖರಿಸಿಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯಂತ್ರಣ ಘಟಕಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಅಕ್ರಮಗಳ ಮೇಲೆ ಜಿಲ್ಲಾಧಿಕಾರಿ ಕಚೇರಿಯಿಂದಲೇ ನಿಗಾ ಇಡಲಾಗುತ್ತದೆ.

ಕಪ್ಪು ಪಟ್ಟಿ ಧರಿಸಿ ಉಪನ್ಯಾಸಕರ ಪ್ರತಿಭಟನೆ

ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ‘ಕಪ್ಪುಪಟ್ಟಿ ಧರಿಸಿ’ ಪರೀಕ್ಷಾ ಕಾರ್ಯಕ್ಕೆ ಹಾಜರಾಗುವ ಮೂಲಕ ಪ್ರತಿಭಟನೆ ದಾಖಲಿಸಲು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ತೀರ್ಮಾನಿಸಿದೆ.

ಈ ಬಗ್ಗೆ ‘ವಿಜಯ ಕರ್ನಾಟಕ’ದೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಎ.ಎಚ್‌. ನಿಂಗೇಗೌಡ, ಉಪನ್ಯಾಸಕರಿಗೆ ವೇತನ ತಾರತಮ್ಯ ಸರಿಪಡಿಸುವ ಸಂಬಂಧ ಕುಮಾರ ನಾಯಕ್‌ ಸಮಿತಿ ವರದಿ ಜಾರಿಗೆ ತರುವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈಗಾಗಲೇ ಮೂರು ಬಾರಿ ಭಾರಿ ಪ್ರತಿಭಟನೆ ನಡೆಸಲಾಗಿದೆ. ಸರಕಾರ ನಮ್ಮ ಬೇಡಿಕೆಗಳನ್ನು ಈಡೇರಿಸದ ಕಾರಣ ಪ್ರಥಮ ಪಿಯುಸಿ ಪರೀಕ್ಷೆ ವೇಳೆ ಕಪ್ಪುಪಟ್ಟಿ ಧರಿಸಿ ಪರೀಕ್ಷಾ ಕಾರ್ಯಕ್ಕೆ ಹಾಜರಾಗುವ ಮೂಲಕ ಪ್ರತಿಭಟನೆ ದಾಖಲಿಸಲಿದ್ದೇವೆ ಎಂದರು.

ಅಕ್ರಮ ತಡೆಯಲು ಕಟ್ಟುನಿಟ್ಟಿನ ಕ್ರಮ

“ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಇತರೆ ಯಾವುದೇ ಅಕ್ರಮಗಳು ನಡೆಯದಂತೆ ಕಣ್ಗಾವಲಿಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸುವಂತೆ ಈಗಾಗಲೇ ಪೊಲೀಸ್‌ ಇಲಾಖೆಗೆ ಮನವಿ ಮಾಡಲಾಗಿದೆ. ಪರೀಕ್ಷಾ ಅಕ್ರಮದಲ್ಲಿ ತೊಡಗುವವರಿಗೆ ತಲಾ ಐದು ಲಕ್ಷ ರೂ. ದಂಡ ಹಾಗೂ ಐದು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಈಗಾಗಲೇ ಒಟ್ಟು 35,156 ಮೌಲ್ಯಮಾಪಕರು ನೋಂದಣಿ ಮಾಡಿಕೊಂಡಿದ್ದು, ಸಿಇಟಿ ಫಲಿತಾಂಶ ಪ್ರಕಟಗೊಂಡ ಕೂಡಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು,” ಎಂದು ಅಧಿಕಾರಿಗಳು ತಿಳಿಸಿದರು.

Related posts

ಆತ್ಮಹತ್ಯೆ ಮಾಡಿಕೊಂಡವರಲ್ಲಿ ರೈತರಿಗಿಂತ ಇವರೇ ಹೆಚ್ಚು

Times fo Deenabandhu

ಕೊರೊನಾ ವೈರಸ್​ ಸೃಷ್ಟಿಸಿರೋ ಕರಾಳತೆ ಬಿಚ್ಚಿಟ್ಟು ರಕ್ಷಿಸುವಂತೆ ಸರ್ಕಾರದ ಮುಂದೆ ಪಾಕ್​ ವಿದ್ಯಾರ್ಥಿಗಳ ಅಳಲು

Times fo Deenabandhu

ಮಾನವೀಯತೆ ಮೆರೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ -ಕರೋನಾದಿಂದ ಸಮಾಜವನ್ನು ರಕ್ಷಿಸುವ ಸಲುವಾಗಿ ಒಂದು ದಿನದ ವೇತನ

Times fo Deenabandhu