Times of Deenabandhu
  • Home
  • ಮುಖ್ಯಾಂಶಗಳು
  • ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ
ಮುಖ್ಯಾಂಶಗಳು ರಾಜ್ಯ

ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ

ಬೆಂಗಳೂರು, ಮಾರ್ಚ್ 13: ಕಾಲೇಜು ಶಿಕ್ಷಣ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಶುಕ್ರವಾರ ಸುತ್ತೋಲೆ ಹೊರಡಿಸಿ. ಕೊರೊನಾ ವೈರಸ್​ ರೋಗವು ಸಾಂಕ್ರಾಮಿಕವಾಗಿ ಹರಡುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಲಾಖೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳಿಗೆ ಶಿಕ್ಷಣ ಇಲಾಖೆ 15 ದಿನ ರಜೆ ಘೋಷಣೆ ಮಾಡಿದೆ. ಹಾಗೇ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಿಗೆ (1 ರಿಂದ 6 ನೇ ತರಗತಿವರೆಗೆ) ಮುಂದಿನ ಆದೇಶದವರೆಗೆ ರಜೆ ನೀಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಮಾಡಿದೆ.

ಸಿಬ್ಬಂದಿ ಕೆಲಸ ಮಾಡಬೇಕು

ಕಾಲೇಜು ಶಿಕ್ಷಣ ಇಲಾಖೆ ಮಾರ್ಚ್​​ 14 ರಿಂದ 28ರವರೆಗೆ ರಜೆ ಘೋಷಣೆ ಮಾಡಿದೆ. ಆದರೆ ಎಂದಿನಂತೆ ಕಾಲೇಜಿನ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ನಿರ್ವಹಿಸಲಿವೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಹೈ ಅಲರ್ಟ್ ಇದುವರೆಗೆ ರಾಜ್ಯದಲ್ಲಿ ಕೊರೊನಾಕ್ಕೆ ಒಬ್ಬ ವ್ಯಕ್ತಿ ಮೃತಪಟ್ಟು, ಐವರಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯ ಸರ್ಕಾರ ಹೈ ಅಲರ್ಟ್ ಘೊಷಿಸಿದೆ. ಕೊರೊನಾ ಹರಡದಂತೆ ತಡೆಯಲು ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಒಂದು ವಾರಗಳ ಕಾಲ ಮಾಲ್, ಚಿತ್ರಮಂದಿರ, ಪಬ್, ಸಾರ್ವಜನಿಕ ಕಾರ್ಯಕ್ರಮಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ.

Related posts

ಇಟಲಿಯನ್ನು ಹಿಂದಿಕ್ಕಿ ಆರನೇ ಸ್ಥಾನಕ್ಕೇರಿದ ಭಾರತ

 ಹೊಸದಾಗಿ 2,958 ಪ್ರಕರಣ, ಸೋಂಕಿತರ ಸಂಖ್ಯೆ 49,391ಕ್ಕೆ

ಪ್ರಾಣಿಗಳಿಗಾಗಿ ಇದೇನು ಮಾಡಿಕೊಂಡುಬಿಟ್ಟರು ಸನ್ನಿ ಲಿಯೋನ್​? ಏನಾಯಿತು ಅವರ ಬೆನ್ನಿಗೆ….?

Times fo Deenabandhu