Times of Deenabandhu
  • Home
  • ಜಿಲ್ಲೆ
  • ಕೋವಿಡ್-19 ತಡೆಗಟ್ಟಲು ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ-ಡಾ. ಶಾಲಿನಿ ರಜನೀಶ್
ಚಿಕ್ಕಮಗಳೂರು ಜಿಲ್ಲೆ

ಕೋವಿಡ್-19 ತಡೆಗಟ್ಟಲು ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ-ಡಾ. ಶಾಲಿನಿ ರಜನೀಶ್

ಚಿಕ್ಕಮಗಳೂರು, ಏ.04: ಕೋವಿಡ್-19 ಸೋಂಕು ತಡೆಗಟ್ಟಲು ಹಾಗೂ ನಿಯಂತ್ರಿಸಲು ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದ ಎಲ್ಲಾ ಟಾಸ್ಕ್‍ಪೋರ್ಸ್ ಸಮಿತಿಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು  ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಆವರಣದ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ಕೋವಿಡ್-19 ತಡೆಗಟ್ಟುವ ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತ ಕ್ರಮಗಳ ಕುರಿತು ಇಲಾಖೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಕೊವೀಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ ಅದಕ್ಕಾಗಿ ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್‍ಪೋರ್ಸ್ ಸಮಿತಿಗಳ ಅಧಿಕಾರಿಗಳು ಸೋಂಕಿನ ಕುರಿತು ಜಾಗೃತಿ ಮೂಡಿಸುವ ಮೂಲಕ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲೆಯ ಜನತೆಯಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸಲು ಹಾಗೂ ಸೋಂಕಿನ ಲಕ್ಷಣಗಳು ಕಂಡು ಬಂದಾಗ ಆಶಾ ಕಾರ್ಯಕರ್ತೆಯರು, ಆರೋಗ್ಯಾಧಿಕಾರಿ ಸಿಬ್ಬಂದಿಗಳ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ದಿನದ ಮಾಹಿತಿ ಕಲೆಹಾಕುವಂತೆ ಸಲಹೆ ನೀಡಿದರು.

ಬಾಣಂತಿಯರು, ಗರ್ಭಿಣಿಯರು ಇದ್ದಲ್ಲಿ ಅವರಿಗೆ ತಪಾಸಣೆ, ಚಿಕಿತ್ಸೆಗಾಗಿ ಪ್ರತ್ಯೇಕ ಆರೋಗ್ಯ ಕೊಠಡಿಗಳು ಇರುವಂತೆ ನೋಡಿಕೊಳ್ಳಬೇಕು, ನಿರ್ಗತಿಕರು, ಅಲೆಮಾರಿಗಳು, ಮಾಹಿತಿ ತಿಳಿಯದಿದ್ದವರು ಇದ್ದಲ್ಲಿ ಅವರಿಗೆ ಸೋಂಕಿನ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಮುಂದಿನ ದಿನಗಳಲ್ಲಿ ಸೋಂಕು ಹರಡುವ ಮುಂಜಾಗ್ರತ ಕ್ರಮವಾಗಿ ಆಸ್ಪತ್ರೆಗಳಲ್ಲಿ ಪೂರಕ ಔಷಧಿಗಳು, ಸೋಂಕಿತರ ಚಿಕಿತ್ಸೆಗಾಗಿ ಪ್ರತೇಕ ಕೊಠಡಿಗಳು, ವೆಂಟಿಲೇಟರ್ ಸೇರಿದಂತೆ ಇತರ ಚಿಕಿತ್ಸಾ ಉಪಕರಣಗಳನ್ನು ಇರಿಸಿಕೊಳ್ಳುವಂತೆ ಸೂಚಿಸಿದ ಅವರು ಸುರಕ್ಷಾ ಸಾಧನಗಳಾದ ಮಾಸ್ಕ್, ಸ್ಯಾನಿಟೈಸರ್ ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಜನತೆಯಲ್ಲಿ ಹೆಚ್ಚಾಗಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಪೂವಿತಾ, ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್ ಪಾಂಡೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಉಮೇಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ಕುಮಾರ್ ನಾಯ್ಕ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ನಗರ ಸಭೆ ಆಯುಕ್ತ ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

 

 

Related posts

ಪದಗ್ರಹಣ ಸಮಾರಂಭದ ಪ್ರಚಾರ ವಾಹನಕ್ಕೆ ಪಾಲಿಕೆ ವಿ ಪ ನಾಯಕ ಹೆಚ್.ಸಿ.ಯೋಗೀಶ್ ಚಾಲನೆ

ಟೆಂಟ್‌ನೊಳಗೆ ಶಾಲೆ ನಡೆಸುವ ದುರ್ಗತಿ ತಾಲೂಕಿಗೆ ಬಂದಿಲ್ಲ

Times fo Deenabandhu

ಒಂದು ವರ್ಷ ಪೂರೈಸಿದ ಮೇಯರ್ ಎಸ್.ಎನ್.ಚನ್ನಬಸಪ್ಪರ ಮನದ ಮಾತು..

Times fo Deenabandhu