Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು

ಭಾರತದಲ್ಲಿ 9,152 ಪ್ರಕರಣ, 300 ದಾಟಿದ ಸಾವಿನ ಸಂಖ್ಯೆ

ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಕಳೆದ 24 ಗಂಟೆಗಳಲ್ಲಿ 35 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದಾಗಿ ಕೋವಿಡ್‌–19ನಿಂದ ಮೃತಪಟ್ಟವರ ಸಂಖ್ಯೆ 308ಕ್ಕೆ ಏರಿಕೆಯಾಗಿರುವುದು ಕೇಂದ್ರದ ಆರೋಗ್ಯ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಮಾಹಿತಿಯಿಂದ ತಿಳಿದು ಬಂದಿದೆ.

ಸೋಮವಾರ ಬೆಳಿಗ್ಗೆ 9ರ ವರೆಗೂ ಕೊರೊನಾ ವೈರಸ್‌ ಸೋಂಕು ದೃಢಪಟ್ಟ 705 ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ದೇಶದಾದ್ಯಂತ ಒಟ್ಟು ಕೊರೊನಾ ಪೀಡಿತ ಪ್ರಕರಣಗಳು 9,152ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಒಟ್ಟು 7,987 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 856 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳು 2,000 ಸಮೀಪಿಸಿದ್ದು, ಒಟ್ಟು 1,985 ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 149 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ.

ಇನ್ನೂ ದೆಹಲಿಯಲ್ಲಿ ಒಟ್ಟು 1,154 ಪ್ರಕರಣಗಳು, 24 ಮಂದಿ ಸಾವು; ತಮಿಳುನಾಡಿನಲ್ಲಿ 1,043 ಪ್ರಕರಣಗಳು, 11 ಮಂದಿ ಸಾವು; ರಾಜಸ್ಥಾನದಲ್ಲಿ 804 ಪ್ರಕರಣಗಳು, 3 ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 232 ಸೋಂಕು ಪ್ರಕರಣಗಳು ದಾಖಲಾಗಿದ್ದು, 6 ಮಂದಿ ಮೃತಪಟ್ಟಿದ್ದಾರೆ.

ಶನಿವಾರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಚರ್ಚಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಏಪ್ರಿಲ್‌ 14ರ ನಂತರವೂ ಲಾಕ್‌ಡೌನ್‌ ಮುಂದುವರಿಸುವ ಸುಳಿವು ನೀಡಿದ್ದರು. ಈಗಾಗಲೇ ಒಡಿಶಾ, ಮಹಾರಾಷ್ಟ್ರ, ಪಂಜಾಬ್‌ ಹಾಗೂ ಪಶ್ಚಿಮ ಬಂಗಾಳ ಏಪ್ರಿಲ್‌ 30ರ ವರೆಗೂ ಲಾಕ್‌ಡೌನ್‌ ವಿಸ್ತರಿಸಿರುವುದಾಗಿ ಘೋಷಿಸಿವೆ. ಕರ್ನಾಟಕದಲ್ಲೂ ಕೆಲವು ಸಡಿಲಿಕೆಗಳೊಂದಿಗೆ ಲಾಕ್‌ಡೌನ್‌ ಎರಡು ವಾರಗಳು ಮುಂದುವರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

20,000 ರೈಲು ಬೋಗಿಗಳನ್ನು ಐಸೊಲೇಶನ್‌ ವಾರ್ಡ್‌ಗಳಾಗಿ ಪರಿವರ್ತಿಸಲಾಗುತ್ತಿದ್ದು, 5,000 ಬೋಗಿಗಳು ಸಿದ್ಧವಾಗಿವೆ.

Related posts

 ಕರ್ನಾಟಕ ಶಿಕ್ಷಣ ನೀತಿ ತಿಂಗಳಲ್ಲಿ ಅಂತಿಮ: ಸಚಿವ ಎಸ್.ಸುರೇಶ್‌ಕುಮಾರ್

Times fo Deenabandhu

  ರಾಜ್ಯದಲ್ಲಿ ಎರಡೂವರೆ ಸಾವಿರದ ಗಡಿ ದಾಟಿದ ಕೊರೊನಾ ಮತ್ತೆ ಸೆಂಚುರಿ..!

ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶ್ರೀನಿವಾಸ ಪ್ರಸಾದ್‌

Times fo Deenabandhu