Times of Deenabandhu
ಮುಖ್ಯಾಂಶಗಳು

ಕೊರೊನಾ ನಿವಾರಣೆಗೆ ಇಷ್ಟಲಿಂಗ ಪೂಜೆ

ಚಿತ್ರದುರ್ಗ: ಕೊರೊನಾ ಸೋಂಕು ನಿವಾರಣೆಗೆ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನೇತೃತ್ವದಲ್ಲಿ ಹಲವು ಮಠಾಧೀಶರು ಸೋಮವಾರ ಸಂಜೆ ಇಷ್ಟಲಿಂಗ ಪೂಜೆ ನೆರವೇರಿಸಿದರು. ಮನುಕುಲವನ್ನು ಆಪತ್ತಿನಿಂದ ಪಾರು ಮಾಡುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಅಥಣಿಯ ಶಿವಬಸವ ಸ್ವಾಮೀಜಿ, ಮಡಿವಾಳ ಮಾಚಿದೇವ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ, ಶಿರಸಿಯ ಮಲ್ಲಿಕಾರ್ಜುನ ಸ್ವಾಮೀಜಿ, ಬಸವಕಿರಣ ಸ್ವಾಮೀಜಿ ಹಾಗೂ ಕೇತೇಶ್ವರ ಸ್ವಾಮೀಜಿ ಶರಣರೊಂದಿಗೆ ಪೂಜೆ ಕೈಂಕರ್ಯದಲ್ಲಿ ಭಾಗಿಯಾಗಿದ್ದರು.

ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಠದಲ್ಲಿಯೇ ಪ್ರತ್ಯೇಕವಾಗಿ ಇಷ್ಟಲಿಂಗ ಪೂಜೆ ಮಾಡಿದರು. ಮಠದ ಭಕ್ತರು ಸೇರಿದಂತೆ ಹಲವರು ಮನೆಯಲ್ಲಿಯೇ ಇಷ್ಟಲಿಂಗ ಪೂಜೆ ನೆರವೇರಿಸಿದರು.

ಏ.13ರಂದು ಸಂಜೆ 7ಕ್ಕೆ ಇಷ್ಟಲಿಂಗ ಪೂಜೆ ಮಾಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಈ ಕರೆ ನೀಡಿದ್ದವು.

Related posts

ಪೊಲೀಸ್‌ ವರ್ಗಾವಣೆಯಲ್ಲಿ ರಾಜಕಾರಣಿಗಳ ಶಿಫಾರಸ್ಸು ನಿರ್ಲಕ್ಷ್ಯ – ಹೈಕೋರ್ಟ್‌ಗೆ ಸರಕಾರದ ಭರವಸೆ

Times fo Deenabandhu

ಒಟಿಟಿ ರಿಲೀಸ್‌ಗೆ ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳು ಅಸಮಾಧಾನ

ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ರಾಜ್ಯದ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ

Times fo Deenabandhu