Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು ಶಿಕ್ಷಣ

ಈ ವರ್ಷ ಖಾಸಗಿ ಶಾಲೆಗಳು ಫೀಸ್‌ ಏರಿಕೆ ಮಾಡುವಂತಿಲ್ಲ

 

ಬೆಂಗಳೂರು: ಖಾಸಗಿ ಶಾಲಾ ಆಡಳಿತ ಮಂಡಳಿಯವರು 2020-21ನೇ ಸಾಲಿನಲ್ಲಿ ಯಾವುದೇ ಶುಲ್ಕ ಹೆಚ್ಚಳ ಮಾಡದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಅಲ್ಲದೆ, ಕಳೆದ ಸಾಲಿನಲ್ಲಿ ಪಡೆದ ಶುಲ್ಕಕ್ಕಿಂತ ಕಡಿಮೆ ಶುಲ್ಕ ಪಡೆಯಲು ಇಚ್ಛಿಸಿದಲ್ಲಿ ಅಂತಹ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಸ್ವತಂತ್ರ ನಿರ್ಧಾರ ಕೈಗೊಳ್ಳಬಹುದು ಎಂದು ಇಲಾಖೆಯ ಆಯುಕ್ತ ಡಾ. ಕೆ.ಜಿ.ಜಗದೀಶ್‌ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಚುಟುವಟಿಕೆಗಳು ಸಂಪೂರ್ಣವಾಗಿ ನೆಲಕಚ್ಚಿದೆ. ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೋಷಕರು ಮಕ್ಕಳ ಶಾಲಾ ಶುಲ್ಕ ಪಾವತಿಸಲಾಗದೆ ಪರಿತಪಿಸುತ್ತಿದ್ದಾರೆ. ರಾಜ್ಯ ಸರಕಾರದ 2018ರ ಅಧಿಸೂಚನೆಯಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ವಾರ್ಷಿಕ ಶೇ.15ರ ಮಿತಿಯೊಳಗೆ ಬೋಧನಾ ಶುಲ್ಕ ಹೆಚ್ಚಳ ಮಾಡಲು ಅವಕಾಶ ನೀಡಲಾಗಿದೆ. ಆದಾಗ್ಯೂ, ಈ ಬಾರಿ ಶಾಲಾ ಶುಲ್ಕ ಹೆಚ್ಚಳ ಮಾಡದಂತೆ ರಾಜ್ಯಾದ್ಯಂತ ಪೋಷಕರಿಂದ ಒತ್ತಾಯ ಕೇಳಿ ಬಂದಿತ್ತು. ಇದರಿಂದಾಗಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಅವರು 2020-21ನೇ ಸಾಲಿಗೆ ಶಾಲಾ ಶುಲ್ಕ ಹೆಚ್ಚಳ ಮಾಡದಂತೆ ಖಾಸಗಿ ಶಾಲೆಗಳಿಗೆ ಮನವಿ ಮಾಡಿದ್ದರು. ಅಲ್ಲದೆ, ಮಾರ್ಚ್ ಹಾಗೂ ಏಪ್ರಿಲ್‌ ತಿಂಗಳ ಶುಲ್ಕ ಪಾವತಿ ಮಾಡುವಂತೆ ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲೆ ಒತ್ತಡ ಹಾಕದಂತೆಯೂ ಸೂಚಿಸಿದ್ದರು.

ಈ ನಡುವೆ, ಕೆಲ ಖಾಸಗಿ ಶಾಲೆಗಳು ಆನ್‌ಲೈನ್‌ ತರಗತಿ ನೆಪದಲ್ಲಿ ಶುಲ್ಕ ವಸೂಲಾತಿಗೆ ಮುಂದಾಗಿದ್ದವು. ಇದರಿಂದ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ, ಆನ್‌ಲೈನ್‌ ತರಗತಿಗಳ ಹೆಸರಲ್ಲಿ ಶುಲ್ಕ ವಸೂಲಾತಿ ಮಾಡುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಸುತ್ತೋಲೆ ಹೊರಡಿಸಿತ್ತು.

ನಂತರ ಕೆಲವು ಖಾಸಗಿ ಶಾಲೆಗಳ ಮನವಿ ಮೇರೆಗೆ, ಆರ್ಥಿಕವಾಗಿ ಸಮರ್ಥರಿರುವ ಹಾಗೂ ಸ್ವಯಂಪ್ರೇರಣೆಯಿಂದ ಶುಲ್ಕ ಪಾವತಿಸಲು ಮುಂದಾಗುವ ಪೋಷಕರಿಂದ ಮಾತ್ರ ಶುಲ್ಕ ವಸೂಲಾತಿಗೆ ಅವಕಾಶ ಕಲ್ಪಿಸಲಾಯಿತು. ಈ ನಡುವೆ, ದಿಲ್ಲಿ ಮತ್ತು ಉತ್ತರ ಪ್ರದೇಶ ಸರಕಾರಗಳು 2020-21ನೇ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಶಾಲೆಗಳು ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳ ಮಾಡದಂತೆ ಆದೇಶ ಹೊರಡಿಸಿದ್ದವು. ರಾಜ್ಯದಲ್ಲೂಇಂಥದ್ದೇ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಅಂತಿಮವಾಗಿ, ಶಿಕ್ಷಣ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.ಎಂದು ಸುತ್ತೋಲೆ ರವಾನಿಸಲಾಗುತ್ತಿದೆ. ಸರಕಾರದ ಈ ಸೂಚನೆ ನಿರ್ಲಕ್ಷಿಸುವ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗಳ ವಿರುದ್ಧ ಶಿಕ್ಷಣ ಸಂಬಂಧಿ ನಿಯಮಾವಳಿ ಹಾಗೂ ಸಾಂಕ್ರಾಮಿಕ ರೋಗ ನಿರ್ವಹಣೆ ಕಾಯಿದೆಯಡಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು’ ಎಂದು ಶಿಕ್ಷಣ ಸಚಿವ ಎಸ್.‌ ಸುರೇಶ್‌ ಕುಮಾರ್ ಎಚ್ಚರಿಕೆ ನೀಡಿದ್ದಾರೆ

Related posts

ಕೊರೊನಾ ಆಸ್ಪತ್ರೆ ಭರ್ತಿಯಾದರೆ ಮನೆಯಲ್ಲೇ ಚಿಕಿತ್ಸೆ

ಎಪಿಜೆ ಅಬ್ದುಲ್ ಕಲಾಂ ಅವರ ಬಯೋಪಿಕ್​ನ ಫಸ್ಟ್​ ಲುಕ್​ ಫೋಸ್ಟರ್ ಬಿಡುಗಡೆ ಮಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್

Times fo Deenabandhu

ಬುಧವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ, ಅಕ್ರಮದಲ್ಲಿ ತೊಡಗಿದರೆ 5 ಲಕ್ಷ ದಂಡ

Times fo Deenabandhu