Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು

ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಏಕರೂಪ ಪಠ್ಯಕ್ರಮ

 

ಬೆಂಗಳೂರು: ಗುಣಮಟ್ಟದ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಪಠ್ಯಕ್ರಮ ಜಾರಿಗೆ ತರಲು ರಾಜ್ಯ ಸರಕಾರ ಮುಂದಾಗಿದೆ.

ಒಟ್ಟು ಆರು ವಿಶ್ವವಿದ್ಯಾಲಯಗಳ ಕುಲಪತಿಗಳ ಸಮಿತಿಯೊಂದನ್ನು ರಚಿಸಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವೈ.ಎಸ್‌.ಸಿದ್ದೇಗೌಡ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌, ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರಾಮಚಂದ್ರಗೌಡ, ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹಾಗೂ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌ ಅವರನ್ನೊಳಗೊಂಡ ಸಮಿತಿಯು ಈ ಬಗ್ಗೆ ಸಮಗ್ರವಾಗಿ ಅಧ್ಯಯನ ನಡೆಸಿ ಜೂ.30ರ ಒಳಗೆ ಸರಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಸಮಾಜದಲ್ಲಿ ಜ್ಞಾನಾಧಾರಿತ, ಉನ್ನತ ಶಿಕ್ಷಣ, ಸಂಶೋಧನೆ, ಸಮಾಜೋ ಆರ್ಥಿಕತೆ ಮತ್ತು ಪರಿಸರ ಸುಸ್ಥಿರ ಅಭಿವೃದ್ಧಿ ಸೇರಿದಂತೆ ಇತರೆ ವಿಷಯಗಳಿಗೆ ಒತ್ತು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ದೇಶವು ಅಭಿವೃದ್ಧಿ ಸಾಧಿಸಬೇಕಾದರೆ ಆರೋಗ್ಯವಂತ ಮತ್ತು ಉತ್ತಮ ಕೌಶಲ ಹೊಂದಿದ ಸಶಕ್ತ ಮಾನವ ಸಂಪನ್ಮೂಲದ ಅಗತ್ಯವಿದೆ.ಸೂಚಿಸಿದ್ದರು. ಜತೆಗೆ, ನ್ಯಾಸ್ಕಾಂ, ಗಾರ್ನರ್‌ ಇಂಕ್‌ ಹಾಗೂ ವರ್ಲ್ಡ್ ಎಕನಾಮಿಕ್‌ ಫೋರಂ ಸಹ ಕಲಿಕೆ ಮತ್ತು ಬೋಧನೆಯ ವಿಧಾನದಲ್ಲೂ ಬದಲಾವಣೆಯಾಗಬೇಕು ಎಂದು ತಿಳಿಸಿದ್ದವು. ಇದರಿಂದ ನಮ್ಮ ವಿಶ್ವವಿದ್ಯಾಲಯಗಳು ಕೂಡ ಜಾಗತಿಕ ರಾರ‍ಯಂಕಿಂಗ್‌ನಲ್ಲಿ ಉತ್ತಮ ಸ್ಥಾನ ಪಡೆಯುವುದರಲ್ಲಿಅನುಮಾನವಿಲ್ಲ.

ಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಷಯ ತಜ್ಞರು, ಕೈಗಾರಿಕೋದ್ಯಮಿಗಳು, ಅಗತ್ಯಬಿದ್ದಲ್ಲಿ ವಿದೇಶಿ ತಜ್ಞರೊಡನೆ ಸಭೆ, ಚರ್ಚೆ ಹಾಗೂ ಸಂವಾದ ನಡೆಸಿ, ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ’ಏಕರೂಪ ಪಠ್ಯಕ್ರಮ’ದ ರೂಪುರೇಷೆಗಳನ್ನು ತಯಾರಿಸಿ, ಸರಕಾರಕ್ಕೆ ಸಲ್ಲಿಸಲಿದ್ದಾರೆ.

Related posts

ಕೋವಿಡ್‌ನಿಂದ ಗುಣಮುಖರಾದ ನಟ ಅಮಿತಾಬ್‌ ಬಚ್ಚನ್‌ ಆಸ್ಪತ್ರೆಯಿಂದ ಬಿಡುಗಡೆ

Times fo Deenabandhu

ವೈದ್ಯರ 5 ವರ್ಷ ‘ಕಡ್ಡಾಯ ಸೇವಾ ಬಾಂಡ್‌’ಗೆ ನಿರ್ಬಂಧ: ಹೈಕೋರ್ಟ್‌ ಮಹತ್ವದ ಆದೇಶ

Times fo Deenabandhu

ಹೊಸ ವರ್ಷದಲ್ಲೇ ಸಂಪುಟ ವಿಸ್ತರಣೆ, ಜ. 2ರ ನಂತರವಷ್ಟೇ ಸಿಎಂ ದಿಲ್ಲಿಗೆ

Times fo Deenabandhu