Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಜುಲೈ 1ರಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

ನವದೆಹಲಿ: ಸಿಬಿಎಸ್‌ಇಯ 10 ಮತ್ತು 12ನೇ ತರಗತಿಗಳ ಬಾಕಿ ಉಳಿಸಿರುವ 29 ವಿಷಯಗಳ ಪರೀಕ್ಷೆಯನ್ನು ಜುಲೈನಲ್ಲಿ ನಡೆಸಲು ನಿರ್ಧರಿಸಿರುವುದಾಗಿ ಶುಕ್ರವಾರ ಪ್ರಕಟಿಸಲಾಗಿದೆ.

ಹತ್ತು ಮತ್ತು 12ನೇ ತರಗತಿಗಳ 29 ವಿಷಯಗಳ ಪರೀಕ್ಷೆಯನ್ನು ಕೋವಿಡ್‌–19 ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು, ಜುಲೈ 1ರಿಂದ ಜುಲೈ 15ರ ವರೆಗೂ ಪರೀಕ್ಷೆ ನಡೆಸುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಪ್ರಕಟಿಸಿದ್ದಾರೆ.

ಜೆಇಇ (ಮೇನ್ಸ್) ಪರೀಕ್ಷೆ ಜುಲೈ 18ರಿಂದ 23ರ ವರೆಗೂ ನಡೆಸುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈಗಾಗಲೇ ಪ್ರಕಟಿಸಿದೆ. ನೀಟ್‌ (NEET) ಪರೀಕ್ಷೆ ಜುಲೈ 26ರಂದು ನಿಗದಿಯಾಗಿದೆ. ಈ ಪ್ರವೇಶ ಪರೀಕ್ಷೆಗಳಿಗೂ ಮುನ್ನ ಬೋರ್ಡ್‌ ಪರೀಕ್ಷೆಗಳನ್ನು ಪೂರೈಸಲು ಕ್ರಮವಹಿಸಲಾಗಿದೆ.

ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಅನುವಾಗುವ ನಿಟ್ಟಿನಲ್ಲಿ ಜುಲೈನಲ್ಲಿ ಬಾಕಿ ಇರುವ ವಿಷಯಗಳ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷೆ ನಡೆದಿರುವ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸುವಂತೆ ಈ ಹಿಂದೆಯೇ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಅವರು ಈ ಸಂಬಂಧ ಟ್ವೀಟ್‌ ಮಾಡಿದ್ದಾರೆ.

Related posts

ಸೆ.10ರಂದು ರಾಜನಾಥ ಸಿಂಗ್‌ ನೇತೃತ್ವದಲ್ಲಿ ರಫೇಲ್‌ ವಿಮಾನ ಸೇನೆಗೆ ನಿಯೋಜನೆ

Times fo Deenabandhu

 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸಂಪುಟ ನಿರ್ಧಾರ!

 ವಿದೇಶಿ ಹೂಡಿಕೆ ನಿಯಮ ಬಿಗಿ, ಚೀನಾ ಬಂಡವಾಳಕ್ಕೆ ಭಾರತದ ಮೂಗುದಾರ

Times fo Deenabandhu