Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಮೇ 25ರಿಂದ ದೇಶೀಯ ವಿಮಾನ ಹಾರಾಟ ಪ್ರಾರಂಭ: ವಿಮಾನಯಾನ ಸಚಿವಾಲಯ

ನವದೆಹಲಿ: ಮುಂದಿನ ವಾರದಲ್ಲಿ ದೇಶೀಯ ವಿಮಾನ ಸಂಚಾರ ಆರಂಭವಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವಾಲಯ ಬುಧವಾರ ತಿಳಿಸಿದೆ.

ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಅನುಸರಿಸಿ ಮೇ 25(ಸೋಮವಾರ)ರಿಂದ ದೇಶಿಯವಾಗಿ ವಿಮಾನ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದು ಸಚಿವಾಲಯ ಘೋಷಿಸಿದೆ.

ಈ ಕುರಿತು ನಾಗರಿಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಎಲ್ಲಾ ಖಾಸಗಿ ವಿಮಾನಯಾನ ಸಂಸ್ಥೆಗಳಿಗೂ ಸಂದೇಶ ರವಾನಿಸಲಾಗಿದೆ, ಮೇ.25ರಿಂದ ವಿಮಾನ ಹಾರಾಟ ಆರಂಭಿಸುವಂತೆ ಸೂಚಿಸಲಾಗಿದೆ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಕೊರೊನಾ ವೈರಸ್ ಹರಡುವುದನ್ನು ತಡೆಯಲು ದೇಶದಲ್ಲಿ ಲಾಕ್‌ಡೌನ್ ವಿಧಿಸಲಾಗಿತ್ತು. ಇದರ ಪರಿಣಾಮವಾಗಿ ದೇಶೀಯ, ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇದೀಗ ದೇಶೀಯ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ.

ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ವಿಮಾನಯಾನ ಸಚಿವಾಲಯ ಸ್ಪಷ್ಟಪಡಿಸಿದೆ.

Related posts

ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​ ನಿಷ್ಕ್ರಿಯ ದಳದಿಂದ ಸ್ಫೋಟ ಪ್ರಕ್ರಿಯೆ ಯಶಸ್ವಿ

Times fo Deenabandhu

ಭೂಕಂಪವಾಗಿ ಕೊಡಗು ನೆಲಸಮ..! ‘ಬ್ರಹ್ಮಾಂಡ’ ಭವಿಷ್ಯಕ್ಕೆ ಜನತೆ ಕೆಂಡಾಮಂಡಲ..!

ಕರಾವಳಿಯಲ್ಲಿ ನಾಳೆ, ಉಳಿದೆಡೆ ಸೋಮವಾರ ಈದ್‌ ಉಲ್ ಫಿತ್ರ್