Times of Deenabandhu
  • Home
  • ಮುಖ್ಯಾಂಶಗಳು
  • ಭಾರತ–ಚೀನಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿಗೆ ಆಸ್ಪದ ಬೇಡ: ವಿಶ್ವಸಂಸ್ಥೆ
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು ವಿದೇಶ

ಭಾರತ–ಚೀನಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿಗೆ ಆಸ್ಪದ ಬೇಡ: ವಿಶ್ವಸಂಸ್ಥೆ

ನವದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಲು ಕಾರಣವಾಗುವ ಕ್ರಿಯೆಗಳಿಗೆ ಅವಕಾಶ ಕಲ್ಪಿಸಬಾರದು ಎಂದು ವಿಶ್ವಸಂಸ್ಥೆ ಆಗ್ರಹಪಡಿಸಿದೆ.

ಭಾರತ ಮತ್ತು ಚೀನಾ ನಡುವೆ ಗಡಿವಿವಾದ ಶಮನಗೊಳಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಟ್ವೀಟ್‌ ಅನ್ನು ಉಲ್ಲೇಖಿಸಿ, ಯಾರು ಮಧ್ಯಸ್ಥಿಕೆ ವಹಿಸಬೇಕು ಎಂದು ನಿರ್ಧರಿಸುವುದು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಕೆಲಸವಲ್ಲ ಎಂದು ಅವರ ವಕ್ತಾರ ಸ್ಟೀಫನ್‌ ದುಜರ್ರೆಕ್‌ ಬುಧವಾರ ಪ್ರತಿಕ್ರಿಯಿಸಿದ್ದಾರೆ.

ವಿಶ್ವಸಂಸ್ಥೆ ಬೆಳವಣಿಗೆಗಳನ್ನು ಗಮನಿಸುತ್ತಿದೆ. ಪ್ರತಿಕೂಲ ಬೆಳವಣಿಗೆಗೆ ಅವಕಾಶ ನೀಡಬಾರದು ಎಂದು ಆಗ್ರಹಪಡಿಸುತ್ತದೆ ಎಂದರು.

ಭಾರತ ಮತ್ತು ಚೀನಾ ನಡುವೆ ಸುಮಾರು 3,500 ಕಿ.ಮೀ ಉದ್ದದ ಗಡಿ ಇದೆ. ಲಡಾಖ್‌ ಮತ್ತು ಉತ್ತರ ಸಿಕ್ಕಿಂನಲ್ಲಿ ಉಭಯ ದೇಶಗಳ ಸೇನೆಯು ಜಮಾವಣೆಗೊಳ್ಳುತ್ತಿದ್ದು, ಪರಿಸ್ಥಿತಿ ಉದ್ವಿಗ್ನಗೊಳ್ಳುವ ಸೂಚನೆಯನ್ನು ನೀಡಿದೆ.

ಚೀನಾದ ಸೇನೆಯು ಗಡಿಭಾಗದಲ್ಲಿ ತನ್ನ ಸೇನೆಯ ಸಾಮಾನ್ಯ ಗಸ್ತು ಕಾರ್ಯಕ್ಕೆ ಅಡ್ಡಿಪಡಿಸುತ್ತಿದೆ ಎಂದು ಭಾರತ ಆರೋಪಿಸಿದ್ದು, ಇದನ್ನು ಬೀಜಿಂಗ್‌ ನಿರಾಕರಿಸಿದೆ.

ಗಡಿ ಭಾಗದ ಅರಿವು ಭಾರತ ಸೇನೆಗೆ ಪೂರ್ಣವಾಗಿ ಇದೆ. ಪ್ರತಿಕೂಲ ಚಟುವಟಿಕೆಯಲ್ಲಿ ತೊಡಗಿದೆ ಎಂಬ ಆರೋಪಗಳಲ್ಲಿ ಹುರುಳಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾತ್ಸವ ತಿಳಿಸಿದರು.

Related posts

ಭಾರತದಲ್ಲಿ 12 ಸಾವಿರ ಗಡಿ ಸಮೀಪಕ್ಕೆ ಸೋಂಕಿತ ಪ್ರಕರಣ!

Times fo Deenabandhu

ಇಂದು ಮಧು ಬಂಗಾರಪ್ಪನವರ 53ನೇ ಹುಟ್ಟುಹಬ್ಬ: ಬೆಂಗಳೂರಿನಲ್ಲಿ ಅಭಿಮಾನಿಗಳಿಂದ ಸಂಭ್ರಮದ ಆಚರಣೆ

Times fo Deenabandhu

 ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ಡಿಎಂಕೆ ನಾಯಕ ಸ್ಟಾಲಿನ್‌ ಕಿಡಿ

Times fo Deenabandhu