Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು

ಆನ್‌ಲೈನ್‌ ಶಿಕ್ಷಣ: ನಿಲುವು ತಿಳಿಸಲು ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ತಜ್ಞರ ಸಮಿತಿಯ ಅಭಿಪ್ರಾಯ ಪಡೆಯುವ ಮುನ್ನವೇ ರಾಜ್ಯದಲ್ಲಿ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ಆನ್‌ಲೈನ್ ಶಿಕ್ಷಣ ನಿಷೇಧಿಸಿದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರದ ಆದೇಶ ರದ್ದು ಕೋರಿ ಅನುಮಿತಾ ಶರ್ಮಾ ಸೇರಿದಂತೆ ಪೋಷಕರು ಸಲ್ಲಿಸಿದ್ದ ಪಿಐಎಲ್‌ ಅನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

 

ಸರ್ಕಾರದ ಪರ ವಕೀಲರು, ‘ಆನ್‌ಲೈನ್ ಶಿಕ್ಷಣದ ಕುರಿತಂತೆ ಪರಾಮರ್ಶಿಸಲು ಬೆಂಗಳೂರು ವಿ.ವಿ ಮ್ಯಾನೇಜ್‌ಮೆಂಟ್ ಸ್ಟಡೀಸ್ ವಿಭಾಗದ ಮಾಜಿ ಡೀನ್ ಎಂ.ಕೆ. ಶ್ರೀಧರ್ ನೇತೃತ್ವದಲ್ಲಿ 13 ಮಂದಿಯ ಸಮಿತಿ ರಚಿಸಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ’ ಎಂದರು.

 

‘ತಜ್ಞರ ವರದಿ ಬರುವತನಕ ಮಕ್ಕಳು ಆನ್‌ಲೈನ್ ಶಿಕ್ಷಣ ಪಡೆಯಲು ಬಯಸಿದರೆ, ಅದಕ್ಕೆ ಅವಕಾಶ ನೀಡುವ ಬಗ್ಗೆ ನಿಲುವು ತಿಳಿಸಿ’ ಎಂದು ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿತು.

 

Related posts

ಟ್ರಂಪ್ ದುಂಬಾಲು ಬಿದ್ದಿರುವ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯ ರೋಚಕ ವಿವರ!

 ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಸಚಿವ ಸ್ಥಾನಕ್ಕೆ ಹರ್‌ಸಿಮ್ರತ್‌ ಕೌರ್ ರಾಜೀನಾಮೆ

Times fo Deenabandhu

ಇನ್ಫೊಸಿಸ್ ನಾರಾಯಣ ಮೂರ್ತಿ ಅಳಿಯ ಬ್ರಿಟನ್‌ ಹಣಕಾಸು ಸಚಿವ

Times fo Deenabandhu