Times of Deenabandhu
  • Home
  • ಮುಖ್ಯಾಂಶಗಳು
  • ಎಸ್ಎಸ್ಎಲ್ ಸಿ- ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಣೆ ಕುರಿತು ಸಚಿವ ಸುರೇಶ್ ಕುಮಾರ್ ಮಹತ್ವದ ಹೇಳಿಕೆ…..
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ಎಸ್ಎಸ್ಎಲ್ ಸಿ- ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಣೆ ಕುರಿತು ಸಚಿವ ಸುರೇಶ್ ಕುಮಾರ್ ಮಹತ್ವದ ಹೇಳಿಕೆ…..

 

ಚಿಕ್ಕಬಳ್ಳಾಪುರ: ಕೊರೊನಾ ಆತಂಕದಲ್ಲಿಯೇ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಪರೀಕ್ಷೆ ಏನೋ? ಮುಗಿಯುತ್ತಾ ಬಂತು. ಇನ್ನೂ ಫಲಿತಾಂಶಕ್ಕೆ ಇನ್ನೆಷ್ಟು ದಿನ ಕಾಯಬೇಕೆಂಬ ಕುತೂಹಲಕ್ಕೆ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತೆರೆ ಎಳೆದಿದ್ದಾರೆ.

ಜುಲೈ ಅಂತ್ಯಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ  ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ  ಪ್ರಕಟವಾಗಲಿದೆ ಎಂದು ಸುರೇಶ್ ಕುಮಾರ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಸೋಮವಾರ ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಈ ವಿಷಯವನ್ನು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಪದ್ಧತಿ ಅನುಷ್ಟಾನಕ್ಕೆ ತರಲಾಗುವುದು. ಅದಕ್ಕೂ ಮೊದಲು ರಾಜ್ಯದ ಹಿನ್ನಲೆ ಗಮನದಲ್ಲಿ ಇಟ್ಟುಕೊಂಡು ಜೊತೆಗೆ ತಜ್ಞರ ಅಭಿಪ್ರಾಯ ಪಡೆದ ನಂತರ‌ ಯಾವ ರೀತಿಯಲ್ಲಿ ಆನ್ ಲೈನ್ ಶಿಕ್ಷಣ ‌ಜಾರಿಗೆ ತರಬೇಕು‌ ಎಂಬುದನ್ನು‌ ನಿರ್ಧರಿಸುತ್ತೇವೆ ಎಂದರು.

ಎಲ್ ಕೆಜಿ ಹಾಗೂ ಯುಕೆಜಿಗೆ ಆನ್ ಲೈನ್ ಶಿಕ್ಷಣ ಜಾರಿ ಇಲ್ಲ.‌ ಮಾಡಬಾರದು ಕೂಡ. ಆದರೆ ಒಂದರಿಂದ ಆರು, ಏಳರಿಂದ ಹತ್ತನೇ ತರಗತಿಯವರೆಗೆ  ಯಾವ ರೀತಿ ಆನ್ ಲೈನ್ ಶಿಕ್ಷಣ ಅನ್ನುವುದಕ್ಕಿಂತ ತಂತ್ರಜ್ಞಾನ ಬಳಸಿ ಮಕ್ಕಳಿಗೆ‌ ಯಾವ ರೀತಿ ಪಠ್ಯ ಬೋಧನೆ ಮಾಡಬೇಕು ಎಂಬುದನ್ನು ತಜ್ಞರ ಸಮಿತಿ ನೀಡುವ  ವರದಿ ಆಧಾರಿಸಿ ‌ಸರ್ಕಾರ ಕ್ರಮ ಕೈಗೊಳ್ಳಿದೆ ಎಂದರು.

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ‌ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾಜರಿಯಲ್ಲಿ‌ ಅಷ್ಟೊಂದು‌ ವ್ಯತ್ಯಾಸ‌ ಆಗಿಲ್ಲ. ಮಕ್ಕಳಿಗೆ‌ ಪರೀಕ್ಷಾ ಕೇಂದ್ರಗಳು ಸುರಕ್ಷಿತ ಕೇಂದ್ರಗಳಾಗಿವೆ ಎಂದರು

ಸಚಿವ ಸುರೇಶ್ ಕುಮಾರ್ ಬಿಬಿ ರಸ್ತೆಯಲ್ಲಿ ಇರುವ ಸರ್ಕಾರಿ ಪ್ರೌಢ ಶಾಲೆ, ಬಿಜಿಎಸ್. ನ್ಯೂ ಹೊರೈಜಾನ್, ಸಂತ‌ ಜೋಸೆಂಪ್ ಮತ್ತಿತರ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಆರಂಭ ಕ್ಕೂ ‌ಮೊದಲು ಭೇಟಿ ನೀಡಿ ಮಕ್ಕಳಿಗೆ‌ ಶುಭ ಕೋರುವುದರ ಮೂಲಕ ಮಾನಸಿಕವಾಗಿ  ವಿದ್ಯಾರ್ಥಿಗಳಲ್ಲಿ ದೈರ್ಯ ತುಂಬುವ ಕೆಲಸ ಮಾಡಿದರು.

 

Related posts

ಚಲನಚಿತ್ರ ಅಕಾಡೆಮಿ ಅಭಿವೃದ್ದಿಗಾಗಿ 20 ಕೋಟಿ ರೂ.ಅನುದಾನಕ್ಕೆ ಒತ್ತಾಯ

Times fo Deenabandhu

ಕೆ.ಜಿ.ಎಫ್​ ಚಾಪ್ಟರ್​-2 ಫಸ್ಟ್​ ಲುಕ್​ ರಿವೀಲ್​

Times fo Deenabandhu

ಪಾಕಿಸ್ತಾನದಲ್ಲಿ ಹಿಂದೂಗಳಿಗೆ ನಿತ್ಯ ನರಕ! ಇಮ್ರಾನ್ ಖಾನ್ ಸರ್ಕಾರಕ್ಕೆ ಚಾಟಿ ಬೀಸಿದ ವಿಶ್ವಸಂಸ್ಥೆ

Times fo Deenabandhu