Times of Deenabandhu
  • Home
  • ಜಿಲ್ಲೆ
  • ಮಾಸಿಕ 12 ಸಾವಿರ ಗೌರವಧನ ನಿಗದಿಪಡಿಸಲು ಮುಖ್ಯಮಂತ್ರಿಗಳಿಗೆ ಆಶಾ ಕಾರ್ಯಕರ್ತೆಯರ ಆಗ್ರಹ …..
ಜಿಲ್ಲೆ ಶಿವಮೊಗ್ಗ

ಮಾಸಿಕ 12 ಸಾವಿರ ಗೌರವಧನ ನಿಗದಿಪಡಿಸಲು ಮುಖ್ಯಮಂತ್ರಿಗಳಿಗೆ ಆಶಾ ಕಾರ್ಯಕರ್ತೆಯರ ಆಗ್ರಹ …..

 

ಶಿವಮೊಗ್ಗ ಜೂ.30: ಈಗ ಇರುವ ಪ್ರೋತ್ಸಾಹ ಧನ ಹಾಗೂ ಗೌರವಧನ ಎಲ್ಲವನ್ನು ಒಟ್ಟಿಗೆ ಸೇರಿಸಿ ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಪಡಿಸಬೇಕು ಎಂದು ಇಂದು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಆಶಾ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ಕೊರೊನಾ ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದ್ದು, ಈ ಸಂದರ್ಭದಲ್ಲಿ ಎಲ್ಲ ಕಾರ್ಯಕರ್ತೆಯರು ತಪಾಸಣೆ ಮಾಡಬೇಕು. ಪಾಸಿಟಿವ್ ಬಂದಿರುವ ಎಲ್ಲರಿಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು, ಚಿಕಿತ್ಸೆ ಅವಧಿಯಲ್ಲಿ ಸಂಪೂರ್ಣ ಗೌರವಧನ ನೀಡಬೇಕು ಮತ್ತು  ಮಾಸ್ಕ್, ಕೈಗವಸು, ಮುಖ ಗವಚ ಮತ್ತು ಸ್ಯಾನಿಟೈಸರ್ ಇತ್ಯಾದಿಗಳನ್ನು ಸಮರ್ಪಕವಾಗಿ ನೀಡಬೇಕು. ಮತ್ತು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸರ್ಕಾರ ಮತ್ತು ಇಲಾಖೆಗೆ ಇಂದು ಸಲ್ಲಿಸಿರುವ ಮನವಿಯಲ್ಲಿರುವ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ಇಂದಿನಿಂದಲೇ 7 ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿವಿಧ ರೀತಿಯ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಈ ಅವಧಿಯಲ್ಲಿ ಬೇಡಿಕೆ ಈಡೇರದಿದ್ದಲ್ಲಿ ಜು.10 ರಿಂದ ರಾಜ್ಯಾದ್ಯಂತ 42 ಸಾವಿರ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟ ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಇಂದು ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಶಿವಮೊಗ್ಗ ತಾಲ್ಲೂಕು ಶಾಖೆಯ ಪದಾಧಿಕಾರಿಗಳಾದ ಕಮಲ, ಶೀಲಾಬಾಯಿ, ರೇಷ್ಮಾ, ಭಾರತಿ, ಸುನಿತಾ, ಸುಮಾ ಇನ್ನಿತರರು ಹಾಜರಿದ್ದರು.

 

Related posts

ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ಪದವಿಪೂರ್ವ ಕಾಲೇಜು ಉಪನ್ಯಾಸಕರ ಪ್ರತಿಭಟನೆ

Times fo Deenabandhu

ಕೆರೆ ಹೂಳು ತೆಗೆಯುವ ವಿಚಾರ : ಜಿ.ಪಂ ಸದಸ್ಯ ಮಣಿಶೇಖರ್ ಮೇಲೆ ಹಲ್ಲೆ

Times fo Deenabandhu

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ವೃದ್ಧಾಶ್ರಮ ಮತ್ತು ಆಶಾಕಿರಣ ಅಂಧ ಮಕ್ಕಳ ಶಾಲೆಗೆ ಅಕ್ಕಿ ವಿತರಣೆ