Times of Deenabandhu
  • Home
  • ಜಿಲ್ಲೆ
  • ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬಹುಜನಸಮಾಜ ಪಾರ್ಟಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಜಿಲ್ಲೆ ಶಿವಮೊಗ್ಗ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಬಹುಜನಸಮಾಜ ಪಾರ್ಟಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

 

ಶಿವಮೊಗ್ಗ ಜೂ.30: ಕೇಂದ್ರ ಸರ್ಕಾರವು ದಿನನಿತ್ಯ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಏರಿಕೆ ಮಾಡಿರುವುದನ್ನು ವಿರೋಧಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಹುಜನಸಮಾಜ ಪಾರ್ಟಿ (ಬಿಎಸ್‍ಪಿ) ಜಿಲ್ಲಾ ಶಾಖೆ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಕಳೆದ 4 ತಿಂಗಳಿನಿಂದ ಕೊರೋನಾ ಮಹಾಮಾರಿ ದೇಶಾದ್ಯಂತ ಸುನಾಮಿ ರೀತಿಯಲ್ಲಿ ಅಪ್ಪಳಿಸುತ್ತಿದ್ದು, ಲಕ್ಷಾಂತರ ಜನರು  ಸಂಕಷ್ಟಕ್ಕೆ ಸಿಲುಕಿ ಜೀವನ್ಮರಣದ ಮಧ್ಯೆ ಹೋರಾಡುತ್ತಿರುವ ಸಂದರ್ಭದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದಿನನಿತ್ಯ ಏರಿಸುತ್ತಿರುವುದನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು.

ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಆರ್ಥಿಕವಾಗಿ ಕುಸಿದು ತುಂಬಾ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಇಳಿಯುತ್ತಿದ್ದರೂ ಸಹ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದಿನನಿತ್ಯ ಏರಿಸಿ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಏರಿಕೆಯಿಂದಾಗಿ ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಲು ಕಾರಣವಾಗುತ್ತಿದೆ. ಇದರಿಂದ ಬಡವರಿಗೆ ಮತ್ತಷ್ಟು  ಹೊರೆಯಾಗಿ ಅವರ ಜೀವನ ಚಿಂತಾಜನಕವಾಗುತ್ತಿದೆ. ಇದಕ್ಕೆ ನೇರ ಕಾರಣ ಕೇಂದ್ರ ಬಿಜೆಪಿ ಸರ್ಕಾರದ ಆರ್ಥಿಕ ನೀತಿಯೇ ಕಾರಣವಾಗಿದೆ ಎಂದು ದೂರಿದರು.

ಕೊರೋನಾ ಸಮಯದಲ್ಲಿ ಕೇಂದ್ರ ಸರ್ಕಾರ  ದೇಶದ ಜನರಿಗೆ 20ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ್ದು, ಇದುವರೆಗೆ ಕೆಲವರಿಗೆ ಮಾತ್ರ ಹಣ ತಲುಪಿದ್ದುಘೋಷಣೆಗಳೆಲ್ಲವೂ ಘೋಷಣೆಗಳಾಗಿಯೇ ಉಳಿದಿವೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ತಕ್ಷಣವೇ ಇಳಿಸಿ ಅಗತ್ಯ ವಸ್ತುಗಳು ಜನಸಾಮಾನ್ಯರಿಗೆ ಕಡಿಮೆ ಬೆಲೆಯಲ್ಲಿಸಿಗುವಂತೆ ನೀತಿ ರೂಪಿಸುವಂತೆ ರಾಷ್ಟ್ರಪತಿಗಳು ಸೂಚಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಬಿಎಸ್‍ಪಿ ಜಿಲ್ಲಾಧ್ಯಕ್ಷ ಎ.ಡಿ.ಶಿವಪ್ಪ, ಡಿ.ರವಿ, ಹೆಚ್.ಎನ್.ಶ್ರೀನಿವಾಸ್, ಜಿ.ಸಂಗಪ್ಪ, ಸಿ.ಕೃಷ್ಣಪ್ಪ, ಲಕ್ಷ್ಮೀಪತಿ, ಓ.ರವಿ, ಲೋಕೇಶ್ ತಮ್ಮಡಿಹಳ್ಳಿ ಇನ್ನಿತರರು ಭಾಗವಹಿಸಿದ್ದರು.

 

Related posts

ಮಾಜಿ ಪ್ರದಾನಿ ವಾಜಿಪೇಯಿ ದೇಶ ಕಂಡ ಅಪ್ರತಿಮ ನಾಯಕ: ರಘು ಜನ್ನಾಪುರ

Times fo Deenabandhu

ಜಿಲ್ಲೆಯನ್ನು ಒಂದು ಉತ್ತಮ ಪ್ರವಾಸಿ ತಾಣವನ್ನಾಗಿ ಮಾರ್ಪಾಡಿಸಲಾಗುವುದು: ಶೋಭಾ ಕರಂದ್ಲಾಜೆ

Times fo Deenabandhu

ಸಾಣೇಹಳ್ಳಿಯಲ್ಲಿ ಗಣರಾಜ್ಯೋತ್ಸವ

Times fo Deenabandhu