Times of Deenabandhu
  • Home
  • ಜಿಲ್ಲೆ
  • ಸಾಗರ: ನಗರವ್ಯಾಪ್ತಿಯಲ್ಲಿ ಇನ್ನೆರಡು ಕೊರೋನಾ ಸೋಂಕು ಪ್ರಕರಣ ಪತ್ತೆ: ಸೋಂಕಿತ ವ್ಯಕ್ತಿಯ ಮನೆಯ ಸುತ್ತಮುತ್ತಲಿನ ಪ್ರದೇಶ ಸೀಲ್ ಡೌನ್
ಜಿಲ್ಲೆ ಶಿವಮೊಗ್ಗ

ಸಾಗರ: ನಗರವ್ಯಾಪ್ತಿಯಲ್ಲಿ ಇನ್ನೆರಡು ಕೊರೋನಾ ಸೋಂಕು ಪ್ರಕರಣ ಪತ್ತೆ: ಸೋಂಕಿತ ವ್ಯಕ್ತಿಯ ಮನೆಯ ಸುತ್ತಮುತ್ತಲಿನ ಪ್ರದೇಶ ಸೀಲ್ ಡೌನ್

 

ಸಾಗರ : ನಗರವ್ಯಾಪ್ತಿಯಲ್ಲಿ ಇನ್ನೆರಡು ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ನಗರವ್ಯಾಪ್ತಿಯ ಜನರು ಇನ್ನಷ್ಟು ಜಾಗೃತೆವಹಿಸುವ ಅಗತ್ಯವಿದೆ. ಈಗಾಗಲೆ ಸಾಗರ ನಗರವ್ಯಾಪ್ತಿಯಲ್ಲಿ ನಾಲ್ಕು ಪ್ರಕರಣ ದಾಖಲಾಗಿದ್ದು, ಈ ಪೈಕಿ 3 ಪ್ರಕರಣ ಮೆಸ್ಕಾಂನ ನೌಕರರದ್ದಾಗಿದೆ.

ಶುಕ್ರವಾರ ರಾತ್ರಿ ಕೆಳದಿ ರಸ್ತೆಯ 82 ವರ್ಷದ ವೃದ್ದರೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಸೋಂಕಿತ ವ್ಯಕ್ತಿಯನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸೋಂಕಿತ ವ್ಯಕ್ತಿಯ ಮನೆಯ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನೆ ಬಫರ್ ಜೋನ್ ಎಂದು ಘೋಷಣೆ ಮಾಡಿ, ರಸ್ತೆಯನ್ನು ಸೀಲ್‍ಡೌನ್ ಮಾಡಲಾಗಿದೆ. ವೃದ್ದರು ಕಳೆದ ಹತ್ತು ದಿನಗಳ ಹಿಂದೆ ಹುಬ್ಬಳ್ಳಿಗೆ ಹೋಗಿ ಬಂದಿದ್ದರು ಎನ್ನಲಾಗಿದ್ದು, ಗುರುವಾರ ಜ್ವರದಿಂದ ಬಳಲುತ್ತಿದ್ದು, ತಪಾಸಣೆ ನಡೆಸಿದಾಗ ಶುಕ್ರವಾರ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ.

ಸುಭಾಷ್ ನಗರದ ಮೆಸ್ಕಾಂನ ಸಹಾಯಕ ಅಭಿಯಂತರರೊಬ್ಬರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಸೋಂಕಿತ ವ್ಯಕ್ತಿಯು ಸೊರಬದ ಮೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿದಿನ ಸೊರಬ ಮತ್ತು ಸಾಗರಕ್ಕೆ ಓಡಾಡುತ್ತಿದ್ದರು.

ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಂಕಿತ ವ್ಯಕ್ತಿಯ ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಸ್ಥಳಕ್ಕೆ ನಗರಸಭೆ ಆಯುಕ್ತ ಎಚ್.ಕೆ.ನಾಗಪ್ಪ, ಕಂದಾಯ ಅಧಿಕಾರಿ ಸಂತೋಷಕುಮಾರ್, ರಾಜು, ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮೋಹನ್ ಕೆ.ಎಸ್., ನಗರ ಠಾಣೆ ವೃತ್ತ ನಿರೀಕ್ಷಕ ಅಶೋಕ್ ಕುಮಾರ್ ಇನ್ನಿತರರು ಭೇಟಿ ನೀಡಿ ಸೂಕ್ತ ಬಂದೋಬಸ್ತು ನಡೆಸಿದ್ದಾರೆ.

 

Related posts

ಶಿವಸೇನೆಗೆ ಬೆಂಬಲ ಕಾಂಗ್ರೇಸ್ ಜಾತ್ಯಾತೀತ ನೀಲುವಿನ ಕೊನೆಯ ಮೋಳೆ: ಜಕಾರಿಯಾ

Times fo Deenabandhu

ಕೋವಿಡ್-19 ತಡೆಗಟ್ಟಲು ಜಿಲ್ಲಾಡಳಿತ ಸಕಲ ಸಿದ್ಧ್ದತೆ – ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ

ಏಳು ದಿನಗಳ ಮೂಲ ತರಬೇತಿಯ ಸಮಾರೋಪ

Times fo Deenabandhu