Times of Deenabandhu
  • Home
  • ಜಿಲ್ಲೆ
  • ಶಿವ ಶರಣ ಹಡಪದ ಅಪ್ಪಣ್ಣನವರ ವಿಚಾರಧಾರೆ ಮೈಗೂಡಿಸಿಕೊಳ್ಳಿ: ಸಚಿವ ಸಿ.ಟಿ. ರವಿ
ಚಿಕ್ಕಮಗಳೂರು ಜಿಲ್ಲೆ

ಶಿವ ಶರಣ ಹಡಪದ ಅಪ್ಪಣ್ಣನವರ ವಿಚಾರಧಾರೆ ಮೈಗೂಡಿಸಿಕೊಳ್ಳಿ: ಸಚಿವ ಸಿ.ಟಿ. ರವಿ

 

ಚಿಕ್ಕಮಗಳೂರು, ಜು.೦೬: ಶರಣ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು, ಕಾಯಕವೇ ಕೈಲಾಸ ಎಂಬ ತತ್ವದ ಮೇಲೆ ನಂಬಿಕೆ ಇರುವ ಶಿವ ಶರಣ ಹಡಪದ ಅಪ್ಪಣ್ಣ ಅವರ ವಿಚಾರಧಾರೆಗಳನ್ನು ಪ್ರಸ್ತುತ ಸಮಾಜ ಮೈಗೂಡಿಸಿಕೊಳ್ಳಬೇಕು ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು ಹೇಳಿದರು.
ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶಿವ ಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
೧೨ನೇ ಶತಮಾನದಲ್ಲಿ ಶಿವ ಶರಣ ಹಡಪದ ಅಪ್ಪಣ್ಣನವರು ಕಾಯಕ ಯೋಗಿ ಹಾಗೂ ಕಾಯಕವೇ ಕೈಲಾಸ ಎಂದ ಮಹಾನ್ ತತ್ವದ ಮೇಲೆ ನಂಬಿಕೆ ಹೊಂದಿದ್ದ ಬಸವಣ್ಣನವರ ಅನುಯಾಯಿ ಆಗಿ ಸಾಮಾಜಿಕ ನ್ಯಾಯ ಹಾಗೂ ಸಾಮಾಜಿಕ ಸಮಾನತೆ ಹೆಚ್ಚಿನ ಮಹತ್ವ ನೀಡಿ ಒಂದು ನೆಲೆಗಟ್ಟನ್ನು ಸೃಷ್ಟಿಸಿದವರಲ್ಲಿ ಒಬ್ಬರು ಎಂದರು.
ಶರಣ ಹಡಪದ ಅಪ್ಪಣನವರ ತತ್ವಾದರ್ಶ ಹಾಗೂ ವಿಚಾರಧಾರೆಗಳನ್ನು ನಾವುಗಳು ಅಳವಡಿಸಿಕೊಂಡಲ್ಲಿ ಸಮಾಜದಲ್ಲಿ ಉಂಟಾಗುವ ಅಸಮಾನತೆ, ಸಾಮಾಜಿಕ ವಿಪ್ಲವಗಳು ಹಾಗೂ ಮೇಲು-ಕೀಳು ಎಂಬ ಭಾವನೆಗಳಿಂದ ದೂರವಾಗಬಹುದು ಎಂದರು.
ಕಾಯಕ ತತ್ವವನ್ನು ಅಳವಡಿಸಿಕೊಂಡು ತಾವು ಮಾಡುವ ಕೆಲಸವನ್ನು ಶ್ರದ್ಧೆ ಹಾಗೂ ಭಕ್ತಿಯಿಂದ ಮಾಡಿದ್ದಲ್ಲಿ ಸಮಾಜದಲ್ಲಿ ಗೌರವ ದೊರೆಯಲಿದೆ ಎಂದು ಶರಣ ಹಡಪದ ಅಪ್ಪಣನವರು ತಿಳಿಸಿದ್ದಾರೆ ಎಂದು ತಿಳಿಸಿದರು.
ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಹಾಗೂ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಶರಣ ಹಡಪದ ಅಪ್ಪಣ ಅವರು ಕಾರ್ಯನಿರ್ವಹಿಸಿದ್ದು ಹಾಗೂ ಅನುಭವ ಮಂಟಪದಲ್ಲಿ ಸಮಾನತೆಯನ್ನು ಎತ್ತಿಹಿಡಿದವರಲ್ಲಿ ಒಬ್ಬರಾಗಿದ್ದರು ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶುಭಾ ಸತ್ಯಮೂರ್ತಿ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಪೂವಿತಾ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

 

 

Related posts

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ: ಬಸವರಾಜ್ ಚೇಂಗಟಿ

Times fo Deenabandhu

ರೋಟರಿ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ

ಮಾವು ಮತ್ತು ಗೇರು ಬೆಳೆಗಾರರಿಗೆ ಅಗತ್ಯ ಸಲಹೆಗಳು

Times fo Deenabandhu