Times of Deenabandhu
  • Home
  • ಪ್ರಧಾನ ಸುದ್ದಿ
  • ಬಿಗ್ ಬ್ರೇಕಿಂಗ್ ನ್ಯೂಸ್ : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೊನಾ ಪಾಸಿಟಿವ್….
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

ಬಿಗ್ ಬ್ರೇಕಿಂಗ್ ನ್ಯೂಸ್ : ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೊನಾ ಪಾಸಿಟಿವ್….

 

ಮಂಡ್ಯ:  ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ಸ್ವತ; ಸುಮಲತಾ ಅವರೆ ತಮ್ಮ ಫೇಸ್ಬುಕ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಕಳೆದ ಶನಿವಾರದಂದು ನನಗೆ ಸ್ವಲ್ಪಮಟ್ಟಿನ ಗಂಟಲು ನೋವು ಹಾಗೂ ತಲೆನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ಜಿಲ್ಲೆಯಲ್ಲಿ ಕ್ಷೇತ್ರದ ಕಾರ್ಯಗಳಿಗಾಗಿ ತಿರುಗಾಡಿದ್ದರಿಂದಾಗಿ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ ಕೋವಿಡ್-19 ಪರೀಕ್ಷೆಗೆ ಒಳಗಾದಾಗ ಪಾಸಿಟಿವ್ ಇರುವುದು ಗೊತ್ತಾಯಿತು. ವೈದ್ಯರ ಸಲಹೆಯನ್ನು ತೆಗೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಂಡು ಮನೆಯಲ್ಲಿಯೇ ಕ್ವಾರಂಟೈನ್ ಪಡೆದುಕೊಂಡು ಇದ್ದೇನೆಂದು ಸುಮಲತಾ ತಿಳಿಸಿದ್ದಾರೆ.

ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ನಾನು ಭೇಟಿ ಕೊಟ್ಟಿರುವ ಸ್ಥಳ, ವ್ಯಕ್ತಿಗಳ ವಿವರವನ್ನು ಸರ್ಕಾರಿ ಅಧಿಕಾರಿಗಳಿಗೆ ನೀಡಿದ್ದೇನೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೊರೊನಾ ಲಕ್ಷಣಗಳು ಕಂಡುಬಂದಿದ್ದರೆ ಕೂಡಲೇ ಪರೀಕ್ಷೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ.

Related posts

ಮನೆಯಲ್ಲೇ ಕೊರೊನಾ ಪರೀಕ್ಷೆಗೆ ಬಂದಿದೆ ಕಿಟ್‌: 10 ನಿಮಿಷದಲ್ಲೇ ರಿಸಲ್ಟ್‌!!

ಮಂಜುನಾಥಗೌಡರ ನಡೆ ಕಾಂಗ್ರೆಸ್ ನೆಡೆಗೆ?: ಡಿ ಕೆ ಶಿವಕುಮಾರ್ ಗೌಡರನ್ನು ಕರೆಸಿಕೊಂಡಿದ್ದರ ಗುಟ್ಟೇನು?

Times fo Deenabandhu

ರಾಜ್ಯದಲ್ಲಿ ಕಾರ್ಮಿಕರ ಸ್ಥಳಾಂತರಕ್ಕೂ ಅನುಮತಿ

Times fo Deenabandhu