Times of Deenabandhu
  • Home
  • ಪ್ರಧಾನ ಸುದ್ದಿ
  • ಸಿಎಂ ಮನೆಗೂ ಕಾಲಿಟ್ಟ ಕೊರೊನಾ, ಸಿಬ್ಬಂದಿಗೆ ಪಾಸಿಟಿವ್‌, ಯಡಿಯೂರಪ್ಪ ಕ್ವಾರಂಟೈನ್
ಪ್ರಧಾನ ಸುದ್ದಿ ಮುಖ್ಯಾಂಶಗಳು

ಸಿಎಂ ಮನೆಗೂ ಕಾಲಿಟ್ಟ ಕೊರೊನಾ, ಸಿಬ್ಬಂದಿಗೆ ಪಾಸಿಟಿವ್‌, ಯಡಿಯೂರಪ್ಪ ಕ್ವಾರಂಟೈನ್

ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿ ಮತ್ತು ಬಿ.ಎಸ್‌.ಯಡಿಯೂರಪ್ಪ ಅವರ ಹೆಚ್ಚುವರಿ ಚಾಲಕರೊಬ್ಬರಿಗೆ ಕೊರೊನಾ ಪಾಸಿಟವ್ ಆಗಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಕೋವಿಡ್‌ ಮಾರ್ಗಸೂಚಿ ಅನುಸಾರ ದ್ವಿತೀಯ ಸಂಪರ್ಕಿತರು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಇನ್ನು ಕೆಲವು ದಿನಗಳು ಮನೆಯಿಂದಲೇ ಕಾರ್ಯ ನಿರ್ವಹಿಸಲಿದ್ದಾರೆ. ಸೋಮವಾರ ಅಧಿಕಾರಿಗಳ ಜತೆಗೆ ವಿಡಿಯೊ ಸಂವಾದ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ‘ಪ್ರಜಾವಾಣಿ’ಗೆ ದೃಢಪಡಿಸಿವೆ.

‘ಮುಖ್ಯಮಂತ್ರಿಯವರು ನಿರಂತರ ಕಾರ್ಯ ನಿರ್ವಹಿಸುತ್ತಿದ್ದು, ಒತ್ತಡ ಹೆಚ್ಚಾಗಿದೆ. ಆದ್ದರಿಂದ ಬಿಡುವು ತೆಗೆದುಕೊಳ್ಳಲೂ ವೈದ್ಯರು ಸೂಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಯಡಿಯೂರಪ್ಪ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದರು, ನೆಗೆಟಿವ್‌ ಬಂದಿತ್ತು. ಸೋಮವಾರದ ಬಳಿಕ ಮತ್ತೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ’ ಎಂದು ಅವರು ತಿಳಿಸಿದರು.

ಮೂಲಗಳ ಪ್ರಕಾರ ಮುಖ್ಯಮಂತ್ರಿ ಗೃಹ ಕಚೇರಿಯ ದೂರವಾಣಿ ಆಪರೇಟರ್‌, ಇಬ್ಬರು ಎಸ್ಕಾರ್ಟ್‌, ಅಡುಗೆಯವರು ಮತ್ತು ಕಾರು ಚಾಲಕನಿಗೆ ಪಾಸಿಟಿವ್‌ ಆಗಿದೆ. ಸುಮಾರು 10 ಜನರಿಗೆ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ, ಕಾವೇರಿ ನಿವಾಸಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.

ಮುಖ್ಯಮಂತ್ರಿ ಹೇಳಿಕೆ:

‘ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ ವೀಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿ ಡ್ ನಿಯಂತ್ರಣಕ್ಕೆ ಸಹಕರಿಸಿ’ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Related posts

ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ನೇಣಿಗೇರಿಸುವ ದಿನ ಫಿಕ್ಸ್​; ಮಾ.3ರಂದು ಮುಂಜಾನೆ 6ಗಂಟೆಗೆ ಗಲ್ಲಿಗೇರಿಸುವಂತೆ ಕೋರ್ಟ್​ ಆದೇಶ

Times fo Deenabandhu

ವಿಂಡೀಸ್​ ವಿರುದ್ಧ ಏಕದಿನ ಸರಣಿ ಗೆಲುವಿನೊಂದಿಗೆ 2019ಕ್ಕೆ ರೋಚಕ ವಿದಾಯ ಹೇಳಿದ ಕೊಹ್ಲಿ ಪಡೆ!

Times fo Deenabandhu

ಕಾಡಿನ ನಡುವೆ ಇರುವ ಪಾಳು ಕೋಟೆಯಲ್ಲಿದೆಯಂತೆ ಕೋಟಿ ಕೋಟಿ ಮೌಲ್ಯದ ಖಜಾನೆ…!

Times fo Deenabandhu