Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಇಂಜಿನಿಯರಿಂಗ್‌, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ರಾಜ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ಇಂಜಿನಿಯರಿಂಗ್ ಪರೀಕ್ಷೆಗಳನ್ನು ರದ್ದುಗೊಳಿಸಿರುವುದಾಗಿ ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.

ಆದರೆ, ಅಂತಿಮ ವರ್ಷದಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ರದ್ದಾಗಿಲ್ಲ. ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಕೋರ್ಸುಗಳ ಅಂತಿಮ ವರ್ಷದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲೇಬೇಕಿದೆ. ಈ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಲು ಯೋಜಿಸಲಾಗಿದೆ.

ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಮೂರನೇ ವರ್ಷದವರೆಗಿನ ಎಲ್ಲ ಸೆಮಿಸ್ಟರ್‌ಗಳ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಡಿಪ್ಲೊಮಾದವರಿಗೆ ಕೂಡ ಎರಡನೇ ವರ್ಷದವರೆಗಿನ ಎಲ್ಲ ಸೆಮಿಸ್ಟರ್‌ಗಳ ಪರೀಕ್ಷೆ ರದ್ದು ಮಾಡಲಾಗಿದೆ. ಪರೀಕ್ಷೆ ಇಲ್ಲದೆಯೇ ಮುಂದಿನ ಸೆಮಿಸ್ಟರ್‌ಗೆ ಪಾಸ್‌ ಮಾಡುವುದಾಗಿ ನಿರ್ಧರಿಸಲಾಗಿದೆ. ಆದರೆ, ಅಂತಿಮ ವರ್ಷದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲೇಬೇಕು ಎಂದು ತಿಳಿಸಿದ್ದಾರೆ.

Related posts

ಲಾಕ್‌ಡೌನ್ ನಡುವೆಯೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ

ಹಿಮದೊಳಗೆ ಸಿಕ್ಕಿದೆ 46,000 ವರ್ಷ ಹಿಂದಿನ ಹಕ್ಕಿಯ ಮೃತದೇಹ…!

Times fo Deenabandhu

 ವಿಶ್ವದ ವಿವಿಧೆಡೆ 1.31 ಕೋಟಿ ಜನರಿಗೆ ಕೊರೊನಾ ಸೋಂಕು