Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಬಾಲಿವುಡ್‌ನ ಖ್ಯಾತ ನಟ ಅಮಿತಾಬ್ ಬಚ್ಚನ್‌ಗೆ ಕೋವಿಡ್-19 ದೃಢ

ಮುಂಬೈ: ಬಾಲಿವುಡ್‌ನ ಖ್ಯಾತ ನಟ ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ.
ಈ ವಿಚಾರವನ್ನು ಸ್ವತಃ ಅಮಿತಾಬ್ ಬಚ್ಚನ್ ಅವರೇ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
‘ನನಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಕುಟುಂಬಸ್ಥರು ಮತ್ತು ಸಿಬ್ಬಂದಿಗೂ ಪರೀಕ್ಷೆ ಮಾಡಿಸಲಾಗಿದ್ದು, ವರದಿಗಾಗಿ‌ ಕಾಯುತ್ತಿದ್ದೇವೆ. ಈ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳ ಬೇಕಾಗಿ ವಿನಂತಿಸುತ್ತೇನೆ,’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮುಂಬೈನ ನಾನಾವತಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.

Related posts

ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸುವ ತುರ್ತು ಏನಿತ್ತು?

ಅಧಿಕಾರ ವಹಿಸಿಕೊಂಡ ದಿನವೇ ಪಾಕ್‌ಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಸೇನಾ ಮುಖ್ಯಸ್ಥ ಮನೋಜ್‌

Times fo Deenabandhu

ಬೆಳಗಿನ ತಿಂಡಿ ಸೇವಿಸದಿದ್ದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!