Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು

ಅಂತರ ಜಿಲ್ಲಾ ಸಂಚಾರ ನಿರ್ಬಂಧಕ್ಕೆ ಎಚ್‌.ಡಿ. ಕುಮಾರಸ್ವಾಮಿ ಒತ್ತಾಯ!

ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಉಲ್ಬಣಿಸುತ್ತಿರುವ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಂದು ವಾರಗಳ ಕಾಲ ಲಾಕ್‌ಡೌನ್‌ ಮಾಡಿರುವ ರಾಜ್ಯ ಸರಕಾರದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ಇದಲ್ಲದೆ ಅಂತರ ಜಿಲ್ಲಾ ಸಂಚಾರನ್ನು ಕೂಡ ನಿರ್ಬಂಧಿಸುವಂತೆ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಒತ್ತಾಯಿಸುತ್ತೇನೆ ಎಂದು ಟ್ವಿಟ್ಟರ್ ಮೂಲಕ ಸರಕಾರವನ್ನು ಕೇಳಿಕೊಂಡಿದ್ದಾರೆ.
ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ ಎಂದು ಲಾಕ್‌ಡೌನ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಶನಿವಾರ ಕೂಡ ಹೊಸ ಸೋಂಕಿತರಲ್ಲಿ ದಾಖಲೆಯ ಏರಿಕೆ ಕಂಡಿದ್ದು ಒಂದೇ ದಿನ 2798 ಮಂದಿಗೆ ಸೊಂಕು ದೃಢವಾಗಿದೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿರ ಸಂಖ್ಯೆ 35 ಸಾವಿರ ದಾಟಿದಂತಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 36216ಕ್ಕೇರಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 20883ಕ್ಕೆ ತಲುಪಿದೆ. ರಾಜ್ಯಾದ್ಯಂತ ಶನಿವಾರ 70 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 613 ಮಂದಿ ಮೃತಪಟ್ಟಂತಾಗಿದೆ.

Related posts

ಮಗನಿಗೆ ಕೋವಿಡ್ ಸೋಂಕು ತಗುಲಿದ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವು

Times fo Deenabandhu

ಹೊಸ ಇತಿಹಾಸ ನಿರ್ಮಾಣಕ್ಕೆ ನಾಂದಿಯಾಗಲಿರುವ ನಾಳಿನ ಅಸಂಖ್ಯ ಪ್ರಮಥರ ಗಣಮೇಳ

Times fo Deenabandhu

ರಾಜ್ಯದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 51ಕ್ಕೆ, ಒಂದೇ ದಿನ 10 ಜನರಲ್ಲಿ ದೃಢ

Times fo Deenabandhu