Times of Deenabandhu
  • Home
  • ಪ್ರಧಾನ ಸುದ್ದಿ
  •  ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್: ಥರ್ಡ್ ಅಂಪೈರ್ ರಿಸಲ್ಟ್‌ಗಾಗಿ ಕಾಯುತ್ತಿದ್ದ ಸಚಿವರಿಗೆ ಕೊರೊನಾ ಕನ್ಫರ್ಮ್‌ ‌!
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್: ಥರ್ಡ್ ಅಂಪೈರ್ ರಿಸಲ್ಟ್‌ಗಾಗಿ ಕಾಯುತ್ತಿದ್ದ ಸಚಿವರಿಗೆ ಕೊರೊನಾ ಕನ್ಫರ್ಮ್‌ ‌!

ಚಿಕ್ಕಮಗಳೂರು: ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್ ರಿಸಲ್ಟ್‌ ಬಂದ ಹಿನ್ನೆಲೆ ಆತಂಕಕ್ಕೀಡಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಇದೀಗ ಮೂರನೇ ಟೆಸ್ಟ್‌ನಲ್ಲೂ ಪಾಸಿಟಿವ್‌ ಎಂದು ದೃಢಪಟ್ಟಿದೆ. ಈ ಮೂಲಕ ಸಚಿವರಿಗೆ ಕೊರೊನಾ ಇರುವುದು ಕನ್ಫರ್ಮ್‌ ಆಗಿದೆ.

ಒಂದು ವಾರದೊಳಗೆ ಸಚಿವರು ಎರಡು ಬಾರಿ ಕೊರೊನಾ ಪರೀಕ್ಷೆ ನಡೆಸಿದ್ದರು. ಈ ಪೈಕಿ ಟೆಸ್ಟ್‌ನಲ್ಲಿ ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್ ಬಂದಿತ್ತು. ಕನ್‌ಫ್ಯೂಷನ್‌ ಇದ್ದ ಹಿನ್ನೆಲೆ ಥರ್ಡ್ ಅಂಪೈರ್ ರಿಸಲ್ಟ್‌ಗಾಗಿ ಭಾನುವಾರ ಮೂರನೇ ಬಾರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು.
ಇದೀಗ ರಿಸಲ್ಟ್‌ ಬಂದಿದ್ದು ಥರ್ಡ್‌ ಅಂಪೈರ್ ರಿಸಲ್ಟ್‌ನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸಚಿವ ಸಿಟಿ ರವಿ ಅವರೇ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, “ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಅಲ್ಲದೇ “ನನ್ನ ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್ 19 ಪರೀಕ್ಷೆಗೆ ಒಳಪಟ್ಟಿದ್ದೆರು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದು ನೆಗೆಟಿವ್ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಮೂಲಕ ರಾಜ್ಯದ ಸಚಿವರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಂತಾಗಿದೆ.

ಕಳೆದ ಕೆಲವು ದಿನಗಳಿಂದ ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ದೃಢಪಡುತ್ತಿದೆ. ಮಂಗಳೂರು ಶಾಸಕ ಭರತ್‌ ಶೆಟ್ಟಿ, ಕುಣಿಗಲ್‌ ಶಾಸಕ ರಂಗನಾಥ್ ಸೇರಿ ಕೆಲವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸಂಸದೆ ಸುಮಲತಾ ಅಂಬರೀಷ್‌ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಜನರ ಸಂಪರ್ಕ ಮಾಡುತ್ತಿರುವ ಹಿನ್ನೆಲೆ ಜನಪ್ರತಿನಿಧಿಗಳಿಗೆ ಕೊರೊನಾ ದೃಢಪಡುತ್ತಿದೆ ಎನ್ನಲಾಗುತ್ತಿದೆ.

Related posts

ಕೊರೊನಾ ನಿವಾರಣೆಗೆ ಇಷ್ಟಲಿಂಗ ಪೂಜೆ

Times fo Deenabandhu

ಭಟ್ಕಳದ ವ್ಯಕ್ತಿಗೆ ಕೋವಿಡ್-19: ಮಂಗಳೂರಿನಲ್ಲಿ ಮೊದಲ ಪ್ರಕರಣ ದೃಢ

Times fo Deenabandhu

 ರಾಜ್ಯದಲ್ಲಿ ದ್ವಿಶತಕ ಸಿಡಿಸಿದ ಕೊರೊನಾ: ಒಂದೇ ದಿನ 216 ಕೇಸ್! 4 ತಿಂಗಳ ಮಗುವಿಗೂ ಸೋಂಕು!