Times of Deenabandhu
  • Home
  • ಪ್ರಧಾನ ಸುದ್ದಿ
  • ಅಡ್ಜಸ್ಟ್‌ಮೆಂಟ್ ರಾಜಕಾರಣವನ್ನು ಹಿಂದೂ ಮಾಡಿಲ್ಲ, ಮುಂದೂ ಮಾಡಲ್ಲ: ಎಚ್‌.ಡಿ. ಕುಮಾರಸ್ವಾಮಿ
ಪ್ರಧಾನ ಸುದ್ದಿ ಮುಖ್ಯಾಂಶಗಳು

ಅಡ್ಜಸ್ಟ್‌ಮೆಂಟ್ ರಾಜಕಾರಣವನ್ನು ಹಿಂದೂ ಮಾಡಿಲ್ಲ, ಮುಂದೂ ಮಾಡಲ್ಲ: ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ಕುರಿತು ಮೃದು ಧೋರಣೆ ಹೊಂದಿರುವ ಕುರಿತು ತಮ್ಮ ಮೇಲಿರುವ ಆರೋಪಗಳಿಗೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ನಾನು ಹಿಂದೆಯೂ ಹೊಂದಾಣಿಕೆ ರಾಜಕೀಯ ಮಾಡಿಲ್ಲ, ಇನ್ನು ಮುಂದೆಯೂ ಮಾಡುವುದಿಲ್ಲ. ಹಿಂಬಾಗಿಲ ರಾಜಕಾರಣಿಗಳಿಂದ ನನಗೆ ಯಾವುದೇ ಡ್ಯಾಮೇಜ್ ಆಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಸ್ವತಃ ಎಚ್ಡಿಕೆ ಟ್ವೀಟ್‌ ಮಾಡಿದ್ದು, ನಾನು ಅಡ್ಜಸ್ಟ್ಮೆಂಟ್ ರಾಜಕಾರಣವನ್ನು ಹಿಂದೆಯೂ ಮಾಡಿಲ್ಲ.ಮುಂದೆಯೂ ಮಾಡಲ್ಲ. ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವಣ ರಾಜಕಾರಣವೇ ಬೇರೆ. ವೈಯಕ್ತಿಕ ವಿಶ್ವಾಸವೇ ಬೇರೆ. ಹಿಂಬಾಗಿಲ ರಾಜಕಾರಣದ ಮೂಲಕ ನೆಲೆ ಕಂಡುಕೊಂಡವರಿಂದ ಯಾವುದೇ ಡ್ಯಾಮೇಜ್ ಮಾಡಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಶಿವಕುಮಾರ್ ಮತ್ತು ನಮ್ಮ ನಡುವಣ ಹಿಂದಿನ ಹಾಗೂ ಇಂದಿನ ರಾಜಕಾರಣ ಬೇರೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಒಂದು ಗುರಿ ಇಟ್ಟುಕೊಂಡೆ ದುಡಿಮೆ ಮಾಡುತ್ತಾರೆ. ಈ ಮಧ್ಯೆ ಹುಳಿ ಹಿಂಡುವವರ ನಾಟಕ ಫಲಿಸದು ಎಂದು ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ತನ್ನ ಬೇಳೆ ಬೇಯಿಸಿಕೊಳ್ಳಲು ಮಸಾಲೆ ಅರೆಯುತ್ತಿರುವ ವ್ಯಕ್ತಿಯ ಕುತಂತ್ರ ರಾಜಕಾರಣಕ್ಕೆ ರಾಮನಗರ ಜಿಲ್ಲೆಯ ಜನತೆ ಸೊಪ್ಪು ಹಾಕುವುದಿಲ್ಲ.
ನೆರೆಹಾವಳಿ, ಕೊರೊನಾ ಸಂಕಷ್ಟ ಸಮಯದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಜನತೆಯ ಹಿತಕಾಯುವ ದೃಷ್ಟಿಯಿಂದ ಸರಕಾರಕ್ಕೆ ಬೆಂಬಲ ಇದೆ ಎಂದಾಕ್ಷಣ ಅದನ್ನು ತಮ್ಮ ಮೂಗಿನ ನೇರಕ್ಕೆ ವ್ಯಾಖ್ಯಾನಿಸುವ ಕೀಳು ಅಭಿರುಚಿಯ ಹೇಳಿಕೆ ನೀಡುವುದು ಯಾರಿಗೂ ಶೋಭೆ ತರುವುದಿಲ್ಲ.
ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯಾ?
ತನಗಾದ ಆಗೇನು? ಅವರಿಗಾದ ಚೇಗೆಯೇನು?
ತನುವಿನ ಕೋಪ ತನ್ನ ಹಿರಿಯತನದ ಕೇಡು.
ಮನದ ಕೋಪ ತನ್ನ ಅರಿವಿನ ಕೇಡು.
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯಸುಡದು, ಕೂಡಲಸಂಗಮದೇವಾ… ಎಂಬ ಬಸವಣ್ಣನವರ ವಚನದ ಮೂಲಕವೇ ಟಾಂಗ್‌ ನೀಡಿದ್ದಾರೆ.

Related posts

ಟ್ರಂಪ್ ದುಂಬಾಲು ಬಿದ್ದಿರುವ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯ ರೋಚಕ ವಿವರ!

ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಉಪ ಮುಖ್ಯಮಂತ್ರಿ ಡಾ.ಅಶ್ವಥ ನಾರಾಯಣ

Times fo Deenabandhu

ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ‘ಲೀಕ್‌ ಪ್ರೂಫ್‌’: ಸಚಿವ ಸುರೇಶ್‌ ಕುಮಾರ್‌ ಭರವಸೆ

Times fo Deenabandhu