Times of Deenabandhu
ಪ್ರಧಾನ ಸುದ್ದಿ ಮುಖ್ಯಾಂಶಗಳು

 ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ 21 ಆಪ್ತ ಸಿಬ್ಬಂದಿಗೆ ನೆಗೆಟಿವ್

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಹ ಇದೇ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಡಳಿತ ಹಾಗೂ ಪ್ರತಿಪಕ್ಷದ ನಾಯಕರಿಬ್ಬರು ಒಂದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಂಕು ದೃಢಪಟ್ಟಿರುವ ವಿಷಯವನ್ನು ಪುತ್ರ ಹಾಗೂ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಬಹಿರಂಗಪಡಿಸಿದ ಬಳಿಕ ಇತ್ತೀಚೆಗೆ ಅವರ ಸಂಪರ್ಕದಲ್ಲಿದ್ದ ವ್ಯಕ್ತಿಗಳಲ್ಲಿ ಆತಂಕ ಶುರುವಾಗಿದೆ.
ಸಿದ್ದರಾಮಯ್ಯ ಅವರ ಆಪ್ತ ಸಿಬ್ಬಂದಿ, ಅಡುಗೆಯವರು, ಪೈಲಟ್‌ ವಾಹನದ ಚಾಲಕ ಸೇರಿ ಒಟ್ಟು 21 ಮಂದಿಗೆ ಆ್ಯಂಟಿಜೆನ್‌ ಟೆಸ್ಟ್‌ ಮಾಡಿಸಲಾಗಿದ್ದು ಎಲ್ಲರಿಗೂ ನೆಗೆಟಿವ್‌ ವರದಿ ಬಂದಿದೆ. ಇನ್ನು ಕೆಲವರು ಗಂಟಲು ದ್ರವವನ್ನು ಪರೀಕ್ಷೆಗೆ ಕೊಟ್ಟಿದ್ದು ವರದಿ ನಿರೀಕ್ಷಿಸಲಾಗುತ್ತಿದೆ.
ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು, ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರು, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಮತ್ತಿತರ ನಾಯಕರು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

ಮನೆ ಸೀಲ್‌ಡೌನ್‌: ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗುತ್ತಿದ್ದಂತೆ ಮೈಸೂರಿನ ರಾಮಕೃಷ್ಣನಗರದಲ್ಲಿರುವ ಅವರ ಮನೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಮೂರು ದಿನಗಳ ಕಾಲ ಇದೇ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದರು. ರಾಕೇಶ್‌ ಸಿದ್ದರಾಮಯ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬದವರು ಹಾಗೂ ಅವರ ಸಂಪರ್ಕದಲ್ಲಿದ್ದವರು ಸ್ವಯಂ ಹೋಮ್‌ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಪತ್ರಕರ್ತರ ಭವನ ಸೀಲ್‌ಡೌನ್‌: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜು.30ರಂದು ಪತ್ರಿಕಾ ಸಂವಾದ ನಡೆದಿದ್ದರಿಂದ ಮೂರು ದಿನಗಳ ಕಾಲ ಪತ್ರಕರ್ತರ ಭವನವನ್ನೂ ಸೀಲ್‌ಡೌನ್‌ ಮಾಡಲಾಗಿದೆ. ಸಂಪರ್ಕದಲ್ಲಿದ್ದ ಪತ್ರಕರ್ತರು ಹೋಮ್‌ ಕ್ವಾರಂಟೈನ್‌ಗೆ ಒಳಗಾಗಿದ್ದು, ಬುಧವಾರ ಸ್ವಾಬ್‌ ಟೆಸ್ಟ್‌ ನಡೆಯಲಿದೆ.

ಬಾದಾಮಿಯಲ್ಲಿ ದೇವಿಗೆ ಪೂಜೆ: ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕರೂ ಆಗಿರುವ ಬಾದಾಮಿ ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಬನಶಂಕರಿ ದೇವಿಗೆ ಕಾಂಗ್ರೆಸ್‌ ಮುಖಂಡರು ವಿಶೇಷ ಪೂಜೆ ಸಲ್ಲಿಸಿದರು. ಬಾಗಲಕೋಟೆಯ ಶಿವ ದೇವಾಲಯದಲ್ಲೂ ವಿಶೇಷ ಪೂಜೆ ಮಾಡಲಾಗಿದೆ.

Related posts

ಈ ಬಾರಿಯ ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆಯಲ್ಲಿ ನಿರೀಕ್ಷೆಗೂ ಮೀರಿದ ವಿಶೇಷತೆ

Times fo Deenabandhu

ಕೇಂದ್ರ ಆರೋಗ್ಯ ಸಚಿವ ಹರ್ಷ್‌ ವರ್ಧನ್‌ಗೆ ಜಾಕ್‌ಪಾಟ್‌..! ಡಬ್ಲ್ಯುಎಚ್‌ಒ ನಾಯಕತ್ವ ಭಾರತದ ಮಡಿಲಿಗೆ?

ಚಾಮರಾಜನಗರ ಜಿಲ್ಲೆಯಲ್ಲಿ ಕೋಳಿ, ಮೊಟ್ಟೆ ಮಾರಾಟಕ್ಕೆ ನಿರ್ಬಂಧ

Times fo Deenabandhu