Times of Deenabandhu
  • Home
  • ಮುಖ್ಯಾಂಶಗಳು
  •  ಮಾದಪ್ಪನ ಗೀತೆಗೆ ಅಪಮಾನ: ಚಂದನ್​ ಶೆಟ್ಟಿ ವಿರುದ್ಧ ಸಿಡಿದೆದ್ದ ಚಾಮರಾಜನಗರ ಯುವಕರು!
ಪ್ರಧಾನ ಸುದ್ದಿ ಮುಖ್ಯಾಂಶಗಳು ಸಿನಿಮಾ

 ಮಾದಪ್ಪನ ಗೀತೆಗೆ ಅಪಮಾನ: ಚಂದನ್​ ಶೆಟ್ಟಿ ವಿರುದ್ಧ ಸಿಡಿದೆದ್ದ ಚಾಮರಾಜನಗರ ಯುವಕರು!

ಚಾಮರಾಜನಗರ: ಬಿಗ್​​ಬಾಸ್​ ವಿಜೇತ ಹಾಗೂ ರ‍್ಯಾಪರ್​ ಚಂದನ್​ ಶೆಟ್ಟಿ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಈ ಬಾರಿ ಅವರು ಮಲೆ ಮಹದೇಶ್ವರ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮೊನ್ನೆಯಷ್ಟೇ “ಕೋಲು ಮಂಡೆ ಜಂಗಮ ದೇವರು” ಎಂಬ ಹೊಸ ರ‍್ಯಾಪ್​ ಸಾಂಗ್ ಅನ್ನು ಚಂದನ್​ ಶೆಟ್ಟಿ ಬಿಡುಗಡೆ ಮಾಡಿದ್ದರು. ಇದೀಗ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ.
ಇದೇ ತಿಂಗಳ 22 ರಂದ ಯೂಟ್ಯೂಬ್‌ನಲ್ಲಿ ಸಾಂಗ್​ ಬಿಡುಗಡೆಯಾಗಿದೆ. ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಗ್ರೂಪ್‌ನಲ್ಲಿ ಚಾಮರಾಜನಗರ ಜಿಲ್ಲೆಯ ಹಲವು ಯುವಕರು ಚಂದನ್​ ವಿರುದ್ಧ ಕಿಡಿಕಾರಿದ್ದಾರೆ. ಈ ಹಿಂದೆ ಯುವ ದಸರಾ ವೇದಿಕೆಯಲ್ಲಿ ಎಂಗೇಜ್‌ಮೆಂಟ್ ಆಗಿದ್ದ ಚಂದನ್. ಇದರಿಂದ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು. ಹೀಗಾಗಲೇ ಯುವ ದಸರಾ ವೇದಿಕೆಯಿಂದ ಚಂದನ್​ ಬ್ಯಾನ್ ಆಗಿದ್ದಾರೆ. ಇದೀಗ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದು ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ.

ಕ್ಷಮೆಯಾಚನೆ: ಇಷ್ಟೇಲ್ಲಾ ನಡೆದ ಬಳಿಕ ಚಂದನ್ ಶೆಟ್ಟಿ ಕ್ಷಮೆಕೋರಿದ್ದು, ಯೂ ಟ್ಯೂಬ್ ನಿಂದ ಹಾಡನ್ನು ತೆಗೆದು ಹಾಕಿದ್ದಾರೆ.

Related posts

ಸಂಬರಗಿ ಸುಮ್ಮನೇ ಬಿಡಲ್ಲ: ಸಂಜನಾ ಆಕ್ರೋಶ

Times fo Deenabandhu

ಇಂದಿನಿಂದ ಭಾರಿ ಮಳೆ ಸಾಧ್ಯತೆ

 ಅ.17ರಂದು ಕಾವೇರಿಗೆ ತೀರ್ಥೋದ್ಭವ ಸಂಭ್ರಮ

Times fo Deenabandhu