Times of Deenabandhu
  • Home
  • ಮುಖ್ಯಾಂಶಗಳು
  • ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡರ ಸಾವಿಗೆ ಎಚ್‌ಡಿಕೆ, ಎಚ್ ಡಿಡಿ ಸಂತಾಪ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡರ ಸಾವಿಗೆ ಎಚ್‌ಡಿಕೆ, ಎಚ್ ಡಿಡಿ ಸಂತಾಪ

ಬೆಂಗಳೂರು: ಕೊರೊನಾ ವೈರಸ್ನಿಂದ ಮೃತಪಟ್ಟ ಭದ್ರಾವತಿ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರ ನಿಧನಕ್ಕೆ  ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಎಂ.ಜೆ. ಅಪ್ಪಾಜಿ (ಅಪ್ಪಾಜಿ ಗೌಡ) ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀರಾ ದು:ಖವಾಯಿತು.
ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿಕೆ ಸಂತಾಪ ಸೂಚಿಸಿದ್ದಾರೆ.
ಉಕ್ಕಿನ ನಗರಿ ಭದ್ರಾವತಿಯ ಕಾರ್ಖಾನೆ ಕಾರ್ಮಿಕರ ಧ್ವನಿಯಾಗಿ ರಾಜಕೀಯ ಪ್ರವೇಶಿಸಿದ ಅಪ್ಪಾಜಿ ಗೌಡರ ನಿಧನ ಈ ನಾಡಿಗೆ ಮತ್ತು ಜೆಡಿಎಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಎಚ್‌.ಡಿ. ದೇವೇಗೌಡರ ಸಂತಾಪ: ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಂತಾಪ ಸೂಚಿಸಿದ್ದಾರೆ. ನಮ್ಮ ಪಕ್ಷದ ಹಿರಿಯ ಮುಖಂಡರು, ಮಾಜಿ ಶಾಸಕರು ಹಾಗೂ ನನ್ನ ಆತ್ಮೀಯರು ಆದ ಅಪ್ಪಾಜಿಗೌಡ ಅವರ ನಿಧನದ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ. ನಮ್ಮ ಪಕ್ಷಕ್ಕೆ ಮತ್ತು ಶಿವಮೊಗ್ಗ ಜಿಲ್ಲೆಗೆ ತುಂಬಲಾಗದ ನಷ್ಟವುಂಟಾಗಿದೆ. ನಾವೆಲ್ಲ ಈ ದಿನ ಒಬ್ಬ ಧೈರ್ಯವಂತ ಧೀಮಂತ ನಾಯಕನನ್ನು ಕಳೆದುಕೊಂಡಿದ್ದೇವಿ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Related posts

ಪ್ರಣಬ್​ ಮುಖರ್ಜಿಯವರ ಜೀವ ಹೋಗಲು ಕೊವಿಡ್​-19 ಮುಖ್ಯ ಕಾರಣವಲ್ಲ…

Times fo Deenabandhu

 ಜುಲೈ 1ರಿಂದ ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ

ನಾಡೋಜ ಪಾಟೀಲ ಪುಟ್ಟಪ್ಪ ಶ್ರದ್ದಾಂಜಲಿ

Times fo Deenabandhu