Times of Deenabandhu
  • Home
  • ಮುಖ್ಯಾಂಶಗಳು
  • ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನವೆಂಬರ್ 30ರವರೆಗೆ ನಿರ್ಬಂಧ
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು

ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನವೆಂಬರ್ 30ರವರೆಗೆ ನಿರ್ಬಂಧ

ನವದೆಹಲಿ: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ವಿಧಿಸಿರುವ ನಿರ್ಬಂಧವನ್ನು ನವೆಂಬರ್‌ 30ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ತಿಳಿಸಿದೆ.

ಆದರೆ, ಕೆಲವೊಂದು ಪ್ರಕರಣಗಳನ್ನು ಗಮನಿಸಿ, ಈಗಾಗಲೇ ನಿಗದಿಯಾಗಿರುವ ಅಂತರರಾಷ್ಟ್ರೀಯ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಂಚರಿಸಲು ಅನುಮತಿ ನೀಡಬಹುದು ಎಂದು ಡಿಜಿಸಿಎ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಡಿಜಿಸಿಎ ಹೊರಡಿಸಿರುವ ಹೊಸ ಆದೇಶ ಅಂತರರಾಷ್ಟ್ರೀಯ ಸರಕು ಸಾಗಣೆ ವಿಮಾನಗಳಿಗೆ ಅನ್ವಯವಾಗುವುದಿಲ್ಲ. ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯುವುದಕ್ಕಾಗಿ ಮಾರ್ಚ್ 23ರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಲಾಗಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಶೇಷ ಅಂತರರಾಷ್ಟ್ರೀಯ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.

 

Related posts

18 ಕೋಟಿ ಜನರಲ್ಲಿ ಕೋವಿಡ್‌ ಪ್ರತಿಕಾಯ: ಅಧ್ಯಯನ ವರದಿ

ಗಾಯಕಿ ಸುಶ್ಮಿತಾ ಆತ್ಮಹತ್ಯೆ ಪ್ರಕರಣ: ಪತಿ ಸೇರಿದಂತೆ ಮೂವರು ಆರೋಪಿಗಳ ಬಂಧನ

Times fo Deenabandhu

ದಿಲ್ಲಿ, ಬಂಗಾಳಕ್ಕೂ ವ್ಯಾಪಿಸಿದ ಪೌರತ್ವದ ಕಿಚ್ಚು

Times fo Deenabandhu