Times of Deenabandhu
  • Home
  • ಮುಖ್ಯಾಂಶಗಳು
  • ಆರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ….
ಮುಖ್ಯಾಂಶಗಳು ರಾಜಕೀಯ ರಾಜ್ಯ

ಆರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ….

ಚಿಕ್ಕಬಳ್ಳಾಪುರ: ಅ. 28: ವಿಧಾನಪರಿಷತ್ ಹಾಗೂ ವಿಧಾನಸಭೆಯ ಆರು ಕ್ಷೇತ್ರಗಳಲ್ಲೂ ಬಿಜೆಪಿ ವಿಜಯ ಸಾಧಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪೆರೇಸಂದ್ರ ಗ್ರಾಮದಲ್ಲಿ ಮತ ಚಲಾಯಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋವಿಡ್ ನ ಸಂಕಷ್ಟದಲ್ಲಿ ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿಕೊಂಡು ಮತ ಚಲಾಯಿಸಬೇಕು ಎಂದು ಮನವಿ ಮಾಡುತ್ತೇನೆ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ವಿಧಾನಪರಿಷತ್‍ನ ನಾಲ್ಕು ಹಾಗೂ ವಿಧಾನಸಭೆಯ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜಯಶಾಲಿಯಾಗಲಿದ್ದಾರೆ ಎಂದರು.

ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಅವರು 40-50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಶಿರಾದಲ್ಲಿ ಕಳೆದ ಬಾರಿ ಬಿಜೆಪಿಗೆ ಶಕ್ತಿ ಇರಲಿಲ್ಲ. ಆದರೆ ಬಿಜೆಪಿ ರಾಜ್ಯ ಸರ್ಕಾರದ ಆಡಳಿತವನ್ನು ನೋಡಿ ಯುವಕರು, ರೈತಾಪಿ ವರ್ಗದವರು ಆಕರ್ಷಿತರಾಗಿದ್ದಾರೆ. ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರಚಾರ ನಡೆಸುತ್ತಿರುವುದರಿಂದ ಬಿಜೆಪಿ ಅಲೆ ಕಾಣಿಸುತ್ತಿದೆ. ಅಲ್ಲಿ ಕೂಡ 10-15 ಸಾವಿರ ಮತಗಳ ಅಂತರದಿಂದ ಡಾ.ರಾಜೇಶ್ ಗೌಡ ಅವರು ವಿಜಯ ಸಾಧಿಸಲಿದ್ದಾರೆ ಎಂದರು.

 

 

 

 

 

 

 

 

 

 

 

 

Related posts

ಸಿಎಂ ಬಿಎಸ್ ವೈ ವಿರುದ್ಧ ಸಂಸದ ಶ್ರೀನಿವಾಸ್ ಪ್ರಸಾದ್ ಬಹಿರಂಗ ಅಸಮಾಧಾನ…

Times fo Deenabandhu

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ..?

Times fo Deenabandhu

ಮಹಿಳಾ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಅರಿವು ಕಾರ್ಯಕ್ರಮ….

Times fo Deenabandhu