ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ಲಲಿತಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಭದ್ರಾವತಿ ಮೂಲದ ಲಲಿತಾ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದು, ಹಾಸ್ಟೆಲ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಿನ್ನೆ ರಾತ್ರಿ ಹಾಸ್ಟೆಲ್ನ ಸಹಪಾಠಿಯೊಂದಿಗೆ ಓದಿಕೊಳ್ಳಲು ಹೊರಗೆ ಹೋಗಿದ್ದು, ರಾತ್ರಿ ರೂಮಿಗೆ ಆಗಮಿಸಿದಾಗ ಬಾಗಿಲು ತೆಗೆದಿಲ್ಲ. ಅನುಮಾನದ ಮೇಲೆ ಬೆಳಿಗ್ಗೆ ಬಾಗಿಲು ತೆಗೆಸಿದಾಗ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸ್ಥಳಕ್ಕೆ ದೊಡ್ಡಪೇಟೆ ಠಾಣಾ ಪೊಲೀಸರು ಹಾಗೂ ಕಾಲೇಜು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
