January 21, 2021
Times of Deenabandhu
ಕ್ರೀಡೆ ದೇಶ ಮುಖ್ಯಾಂಶಗಳು ವಿದೇಶ

ಭಾರತೀಯ ಕ್ರಿಕೆಟಿಗರ ವಿರುದ್ಧ ಜನಾಂಗೀಯ ನಿಂದನೆ..

ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೂರನೇ ಟೆಸ್ಟ್ ಸರಣಿ ನಡೆಯುತಿದ್ದು, ಇದೀಗ ಜನಾಂಗೀಯ ನಿಂದನೆ ಆರೋಪ ಕೇಳಿಬಂದಿದೆ.

ಭಾರತದ ಬೌಲರ್ ಮೊಹಮ್ಮದ್ ಸಿರಾಜ್ ಹಾಗೂ ಬೂಮ್ರಾ ವಿರುದ್ಧ ಆಸೀಸ್ ಅಭಿಮಾನಿಗಳು ಜನಾಂಗೀಯ ನಿಂದನೆ ಮಾಡಿದ್ದಾರೆ. ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನ ಈ ಘಟನೆ ನಡೆದಿದೆ. ಮೈದಾನದಲ್ಲಿದ್ದ ಪ್ರೇಕ್ಷಕರು ಭಾರತೀಯ ಆಟಗಾರರ ವಿರುದ್ಧ ಜನಾಂಗೀಯ ನಿಂದನೆ ಮಾಡಿರುವ ಕುರಿತು ದೂರು ನೀಡಲಾಗಿದೆ.

ದಿನದ ಅಂತಿಮ ಸೆಶನ್ ನಲ್ಲಿ ಮೊಹಮ್ಮದ್ ಸಿರಾಜ್ ಫೈನ್ ಲೆಗ್ ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದರು. ಈ ವೇಳೆ ಕೆಲವು ಆಸೀಸ್ ಅಭಿಮಾನಿಗಳು ಭಾರತೀಯ ಆಟಗಾರನನ್ನು ನಿಂದಿಸಿದ್ದಾರೆ.

ಅಭಿಮಾನಿಗಳು ಅವಾಚ್ಯ ಶಬ್ಧಗಳಿಂದ ಸಿರಾಜ್ ರನ್ನು ನಿಂದಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಈ ಬಗ್ಗೆ ದೂರು ದಾಖಲು:

ಹಂಗಾಮಿ ನಾಯಕ ಅಜಿಂಕ್ಯ ರಹಾನೆ ಮತ್ತು ತಂಡದ ಹಿರಿಯ ಸದಸ್ಯರು ಈ ವಿಚಾರವನ್ನು ಅಂಪಾಯರ್ ಗಳ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ದೂರು ದಾಖಲು ಮಾಡಲಾಗಿದೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಬಿಸಿಸಿಐ ಆಸ್ಟ್ರೇಲಿಯಾಗೆ ಆಗ್ರಹಿಸಿದೆ.

Related posts

ಉದ್ಧವ್ ಠಾಕ್ರೆ ವಿರುದ್ಧ ಕಿಡಿ: ಖಾತೆ ಹಂಚಿಕೆ ವಿಚಾರ ಕುರಿತು ಸಿಎಂ ಬಿಎಸ್ ವೈ ಸ್ಪಷ್ಟನೆ….

Times fo Deenabandhu

ಬ್ರಿಟನ್‍ನಿಂದ ಆಗಮಿಸುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ….

Times fo Deenabandhu

ಕೊಳಚೆ ಪ್ರದೇಶ ನಿವಾಸಿಗಳಿಗೆ ಹಕ್ಕುಪತ್ರ ನೀಡಿ ಮನೆ ಕಟ್ಟಿಕೊಳ್ಳಲು ಬ್ಯಾಂಕ್ ನಿಂದ ಸಾಲ-ಸಚಿವ ಕೆ.ಎಸ್.ಈಶ್ವರಪ್ಪ

Times fo Deenabandhu