ನವದೆಹಲಿ: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿಗೆ ಹೆಣ್ಣು ಮಗು ಜನನವಾಗಿದೆ.
ಕಳೆದ ವರ್ಷ ಆಗಸ್ಟ್ ನಲ್ಲಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಈ ಜೋಡಿ ಸಾಮಾಜಿಕ ಜಾಲತಾಣಕ್ಕೆ ಹೇಳಿಕೊಂಡಿತ್ತು. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಬಳಿಕ ತವರಿಗೆ ಮರಳಿದ ಕೊಹ್ಲಿ, ಭಾರತಕ್ಕೆ ವಾಪಸಾಗಿದ್ದರು.
ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ.ನಿಮ್ಮ ಪ್ರೀತಿ, ಹಾರೈಕೆ ಹೀಗೆ ಇರಲಿ ಎಂದು ಟ್ವಿಟರ್ ನಲ್ಲಿ ವಿರಾಟ್ ಕೊಹ್ಲಿ ಸಂತೋಷ ಹಂಚಿಕೊಂಡಿದ್ದು, ಅಭಿಮಾನಿಗಳು ಶುಭಾಶಯಗಳನ್ನು ಕೋರುತ್ತಿದ್ದಾರೆ.
