ನವದೆಹಲಿ: ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನ ಸುಪ್ರೀಂಕೋರ್ಟ್ ಮುಂದಿನ ಮಂಗಳವಾರಕ್ಕೆ ಮುಂದೂಡಿದೆ.
ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಲುಕಿರುವ ನಟಿ ರಾಗಿಣಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ಧರು. ಆದರೆ ನಟಿ ರಾಗಿಣಿ ಸಲ್ಲಿಸಿದ್ಧ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿ ಜಾಮೀನು ನೀಡಲು ನಿರಾಕರಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ನಟಿ ರಾಗಿಣಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಇದೀಗ ಸುಪ್ರೀಂಕೋರ್ಟ್ ಜನವರಿ 19ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನ ಮುಂದೂಡಿಕೆ ಮಾಡಿದೆ. ಹೀಗಾಗಿ ಸದ್ಯಕ್ಕೆ ನಟಿ ರಾಗಿಣಿಗೆ ಜೈಲೇ ಗತಿ ಎಂಬಂತಾಗಿದೆ.
