January 21, 2021
Times of Deenabandhu
ಚಿಕ್ಕಮಗಳೂರು ಜಿಲ್ಲೆ ಮುಖ್ಯಾಂಶಗಳು

ಸರಳ ಗಣರಾಜ್ಯೋತ್ಸವ ಆಚರಣೆಗೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಕರೆ

ಚಿಕ್ಕಮಗಳೂರು:  ಜಿಲ್ಲಾ ಕೇಂದ್ರದಲ್ಲಿ ಜನವರಿ ೨೬ ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನವರಿ ೨೬ ರಂದು ನಗರದ ಸುಭಾಷ್‌ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ ಎಂದ ಅವರು ವಿವಿಧ ತುಕಡಿಗಳಿಂದ ಪಥ ಸಂಚಲನ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್-೧೯ ಮಾರ್ಗಸೂಚಿಯನ್ವಯ ಆಚರಿಸಿದ್ದು, ಅದರನ್ವಯ ಗಣರಾಜ್ಯೋತ್ಸವ ಕಾರ್ಯಕ್ರಮವು ಸಹ ಯಾವುದೇ ಬದಲಾವಣೆಗಳಿಲ್ಲದೆ ಅದೇ ರೀತಿ ಸರಳವಾಗಿ ನಡೆಯಲಿದೆ. ಪ್ರತಿ ವರ್ಷದಂತೆ ಜಿಲ್ಲಾ ಮಟ್ಟದಲ್ಲಿ ಸೈಕಲ್ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಬಾರಿ ಇರುವುದಿಲ್ಲ ಎಂದರು.
ಜಿಲ್ಲೆಯಲ್ಲಿ ಎಲ್ಲೆಲ್ಲಿ ಅಧಿಕೃತವಾಗಿ ಗಣರಾಜ್ಯೋತ್ಸವ ಆಚರಣೆಯಾಗಲಿದೆಯೋ ಅಂತಹ ಸ್ಥಳಗಳಲ್ಲಿ ಸರ್ಕಾರದ ಆದೇಶದ ಅನುಸಾರ ಸಂವಿಧಾನ ಶಿಲ್ಪಿ ಡಾ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಆಚರಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ಉಪ ಪೊಲೀಸ್ ಅಧೀಕ್ಷಕಿ ಶೃತಿ, ಉಪ ವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,  ಉಪಸ್ಥಿತರಿದ್ದರು.
ಸರಳ ಗಣರಾಜ್ಯೋತ್ಸವ ಆಚರಣೆಗೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಕರೆ
ಚಿಕ್ಕಮಗಳೂರು, ಜ.೧೩: ಜಿಲ್ಲಾ ಕೇಂದ್ರದಲ್ಲಿ ಜನವರಿ ೨೬ ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ನಿರ್ದೇಶನಗಳನ್ನು ಗಮನದಲ್ಲಿಟ್ಟುಕೊಂಡು ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನವರಿ ೨೬ ರಂದು ನಗರದ ಸುಭಾಷ್‌ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ ಎಂದ ಅವರು ವಿವಿಧ ತುಕಡಿಗಳಿಂದ ಪಥ ಸಂಚಲನ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದರು.
ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿಡ್-೧೯ ಮಾರ್ಗಸೂಚಿಯನ್ವಯ ಆಚರಿಸಿದ್ದು, ಅದರನ್ವಯ ಗಣರಾಜ್ಯೋತ್ಸವ ಕಾರ್ಯಕ್ರಮವು ಸಹ ಯಾವುದೇ ಬದಲಾವಣೆಗಳಿಲ್ಲದೆ ಅದೇ ರೀತಿ ಸರಳವಾಗಿ ನಡೆಯಲಿದೆ. ಪ್ರತಿ ವರ್ಷದಂತೆ ಜಿಲ್ಲಾ ಮಟ್ಟದಲ್ಲಿ ಸೈಕಲ್ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಬಾರಿ ಇರುವುದಿಲ್ಲ ಎಂದರು.
ಜಿಲ್ಲೆಯಲ್ಲಿ ಎಲ್ಲೆಲ್ಲಿ ಅಧಿಕೃತವಾಗಿ ಗಣರಾಜ್ಯೋತ್ಸವ ಆಚರಣೆಯಾಗಲಿದೆಯೋ ಅಂತಹ ಸ್ಥಳಗಳಲ್ಲಿ ಸರ್ಕಾರದ ಆದೇಶದ ಅನುಸಾರ ಸಂವಿಧಾನ ಶಿಲ್ಪಿ ಡಾ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಆಚರಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಕುಮಾರ್, ಉಪ ಪೊಲೀಸ್ ಅಧೀಕ್ಷಕಿ ಶೃತಿ, ಉಪ ವಿಭಾಗಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,  ಉಪಸ್ಥಿತರಿದ್ದರು.

Related posts

ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷರಿಂದ ಮತಯಾಚನೆ

Times fo Deenabandhu

ಅಮೇರಿಕಾ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕೃತ ಆಯ್ಕೆ: ಜ.20 ರಂದು ಪದಗ್ರಹಣ…

Times fo Deenabandhu

ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ: 3500 ಕೋಟಿ ರೂ ಸಬ್ಸಿಡಿ ಘೋಷಣೆ….

Times fo Deenabandhu