January 21, 2021
Times of Deenabandhu
  • Home
  • ಮುಖ್ಯಾಂಶಗಳು
  • ಕೃಷಿ ತಿದ್ದುಪಡಿ ಕಾಯ್ದೆ ಕುರಿತ ಸುಪ್ರಿಂ ಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ -ಸಿ.ಟಿ.ರವಿ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಕೃಷಿ ತಿದ್ದುಪಡಿ ಕಾಯ್ದೆ ಕುರಿತ ಸುಪ್ರಿಂ ಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ -ಸಿ.ಟಿ.ರವಿ

ಶಿವಮೊಗ್ಗ: ಕೃಷಿ ತಿದ್ದುಪಡಿ ಕಾಯ್ದೆ ಕುರಿತಾಗಿ ಸುಪ್ರಿಂ ಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷಿ ಮಸೂದೆ ರೈತರ ಕಾಳಜಿಯಿಂದ ತಂದ ಮಸೂದೆಯಾಗಿದೆ. ರೈತರ ಪರವಾಗಿ ಸುಧಾರಣೆಯಿಂದ ತಂದ ಮಸೂದೆಯಲ್ಲಿ ತಪ್ಪು ಹುಡುಕುವವರು ಮೊಸರಲ್ಲಿ ಕಲ್ಲು ಹುಡುಕುವವರು ಎಂದು ಅವರು ಟೀಕಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ರೈತರ ಬಗೆಗಿನ ಒಲವು ಯಾರಿಗೂ ಅರ್ಥವಾಗುತ್ತಿಲ್ಲ. ರೈತರ ಆದಾಯ ದ್ವಿಗುಣಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಜನೆ ರೂಪಿಸಿದ್ದಾರೆ. ನಮ್ಮ ಸರ್ಕಾರ ಸ್ವಾಮಿನಾಥನ್ ವರದಿಯ ಬಹುತೇಕ ಬೇಡಿಕೆಗಳನ್ನು ಈಡೇರಿಸಿದೆ. ರೈತರ ಬೆಳೆದ 28 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು 1ವರೆ, 2ಪಟ್ಟು,ಐದು ಪಟ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಈರಣ್ಣ ಕಡಾಡಿ ಇದ್ದರು.

Related posts

2021ನೇ ಸಾಲಿನ ಬ್ಯಾಂಕ್ ರಜಾ ದಿನಗಳ ಪಟ್ಟಿ ಹೀಗಿದೆ…

Times fo Deenabandhu

ರಾಜ್ಯ ವಿಧಾನಮಂಡಲ ಅಧಿವೇಶನ ನಾಲ್ಕೇ ದಿನಕ್ಕೆ ಮೊಟಕುಗೊಳಿಸಲು ನಿರ್ಧಾರ…

Times fo Deenabandhu

ನಾಳೆಯಿಂದ ಖಾಸಗಿ ಶಾಲೆಗಳಲ್ಲಿ ಆನ್ ಲೈನ್ , ಆಫ್ ಲೈನ್ ಕ್ಲಾಸ್ ಬಂದ್…

Times fo Deenabandhu