ಬೆಂಗಳೂರು: ಜನವರಿ 28ರಿಂದ ಫೆಬ್ರವರಿ 5ರವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಸಂಪ್ರದಾಯದಂತೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಜನವರಿ 28ರಂದು ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ ನಲ್ಲಿ ಬಜೆಟ್ ಅಧಿವೇಶ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ ಅದಕ್ಕೆ ದಿನಾಂಕ ನಿಗದಿ ಮಾಡಿಲ್ಲ ಎಂದರು.
ಬಿಬಿಎಂಪಿ ಹೊರತುಪಡಿಸಿ ರಾಜ್ಯದ ಎಲ್ಲ ನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಗೆ ಸಂಪುಟ ಒಪ್ಪಿಗೆ ನೀಡಲಾಯಿತು. ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಕಟ್ಟಡಗಳ ಆಸ್ತಿ ತೆರಿಗೆ 0.2ರಿಂದ 1.5ಕ್ಕೆ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. 1000 ಚದರ ಅಡಿಗಿಂತ ಕಡಿಮೆ ವಿಸ್ತೀರ್ಣದ ನಿವೇಶನಕ್ಕೆ ತೆರಿಗೆ ವಿನಾಯತಿ ನೀಡಲಾಗಿದೆ.
ಬಾಲಗಂಗಾಧರಮಾಥ ಸ್ವಾಮೀಜಿ ಅವರ ಹುಟ್ಟೂರು ಬಾನಂದೂರಿನಲ್ಲಿ ಸಾಂಸ್ಕೃತಿಕ ಮತ್ತುಪಾರಂಪರಿಕ ಕೇಂದ್ರ ನಿರ್ಮಾಣಕ್ಕಾಗಿ 25 ಕೋಟಿ ರೂ. ವೆಚ್ಚದ ಯೋಜನೆಗೆ ಸಂಪುಟದಲ್ಲಿ ಒಪ್ಪಿಗೆ ನೀಡಲಾಯಿತು.
