January 21, 2021
Times of Deenabandhu
  • Home
  • ಮುಖ್ಯಾಂಶಗಳು
  • ಸೈನಿಕನಿಗೆ ಮಂತ್ರಿಗಿರಿ: ಸಿಎಂ ಬಿಎಸ್ ವೈ ವಿರುದ್ಧ ‘ಹಳ್ಳಿಹಕ್ಕಿ’ ಕೆಂಡಾಮಂಡಲ….
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಸೈನಿಕನಿಗೆ ಮಂತ್ರಿಗಿರಿ: ಸಿಎಂ ಬಿಎಸ್ ವೈ ವಿರುದ್ಧ ‘ಹಳ್ಳಿಹಕ್ಕಿ’ ಕೆಂಡಾಮಂಡಲ….

ಮೈಸೂರು: ಸಚಿವ ಸಂಪುಟ ವಿಸ್ತರಣೆಯಾಗಿದ್ದು 7 ಮಂದಿ ಬಿಎಸ್ ವೈ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಸಂಪುಟ ವಿಸ್ತರಣೆ ವೇಳೆ ಶಾಸಕ ಮುನಿರತ್ನ ಕೈಬಿಟ್ಟು ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿರುವುದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ತಮ್ಮ ನಾಲಿಗೆ ಕಳೆದುಕೊಂಡಿದ್ದಾರೆ. ತಾವು ಕೊಟ್ಟಿದ್ದ ಮಾತು ಕಳೆದುಕೊಂಡಿದ್ದಾರೆ. ಯಡ್ಯೂರಪ್ಪನವರೇ ಸಿದ್ದಲಿಂಗೇಶ್ವರನು ನಿಮಗೆ ಒಳ್ಳೆದು ಮಾಡೋಲ್ಲ. ಕೊಟ್ಟ ಮಾತು ಉಳಿಕೊಳ್ಳದ ನಿಮ್ಮನ್ನ ಸಿದ್ಧಲಿಂಗೇಶ್ವರನು ಕ್ಷಮಿಸೋಲ್ಲ ಎಂದು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಗುಡುಗಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ರಾಜ್ಯದಲ್ಲಿ ಯಾವ ನಾಯಕನಿಗೂ ಕೃತಜ್ಞತೆ ಇಲ್ಲ. ಆ ಸಿದ್ದರಾಮಯ್ಯ ಕರೆದುಕೊಂಡು ಬಂದವು ಅವರು ಹೇಳಲಿಲ್ಲ. ಯಡಿಯೂರಪ್ಪ ಗೆ ತ್ಯಾಗ ಮಾಡಿದವು. ಅವರು ಹೇಳಲಿಲ್ಲ. ಯಡಿಯೂರಪ್ಪ ತಮ್ಮ ನಾಲಿಗೆ ಕಳೆದುಕೊಂಡಿದ್ದಾರೆ. ತಾವು ಕೊಟ್ಟಿದ್ದ ಮಾತು ಕಳೆದುಕೊಂಡಿದ್ದಾರೆ. ಯಡಿಯೂರಪ್ಪ ನೆನಪು ಮಾಡಿಕೊಳ್ಳಬೇಕು ಯಾರಿಂದ ಸರ್ಕಾರ ಬಂತು ಅಂತ. 17 ಜನರ ಭಿಕ್ಷೆಯಲ್ಲಿ ಸರ್ಕಾರ ಇದೆ. ಅವರ ತ್ಯಾಗದಿಂದ ಸರ್ಕಾರ ಬಂದಿದ ಅದನ್ನ ನೆನಪು ಮಾಡಿಕೊಳ್ಳಿ ಎಂದು ಕಿಡಿಕಾರಿದರು.

ನೀವು ಎಂತ ಸರ್ಕಾರ ಮಾಡಿದ್ದೀರಿ ಯಡಿಯೂರಪ್ಪನವರೇ…? 33 ರಲ್ಲೂ 13 ವೀರಶೈವ, 11 ಜನ ಒಕ್ಕಲಿಗ, 4 ಜನ ಕುರುಬರಿಗೆ ಮಂತ್ರಿ ಕೊಟ್ಟಿದ್ದೀರಾ…? ಇದೇನಾ ನಿಮ್ಮ ಸಾಮಾಜಿಕ ನ್ಯಾಯ..? ನಾಗೇಶ್ ರನ್ನ ಯಾಕೇ ತೆಗಿಬೇಕು…? ಎಂದು ಪ್ರಶ್ನಿಸಿದ ಹೆಚ್.ವಿಶ್ವನಾಥ್, ಯಡಿಯೂರಪ್ಪನವರೇ ನಿಮ್ಮಿಂದ ಏನಾದ್ರು ನಿರೀಕ್ಷೆ ಮಾಡಿದ್ನಾ ನಾನು. ಸ್ನೇಹದಲ್ಲಿ ಇದ್ದುದ್ದಕ್ಕೆ ನಿಮಗೆ ಸಹಾಯ ಮಾಡಿದವು. ಆದರೇ ನೀವೆನು ಮಾಡಿದ್ರಿ ಹೇಳಿ. ನೀವು ಏನು ಮಾತು ಕೊಟ್ಟಿದ್ರಿ ಅಂತ ಹೇಳಿ. ಬನ್ನಿ ಬೇಕಿದ್ರೆ ಯಡಿಯೂರಿಗೆ ಹೋಗೋಣ ಏನಾಯ್ತು ಅಂತ ಅಲ್ಲೆ ಮಾತನಾಡೋಣ ಎಂದು ತಿಳಿಸಿದರು.

ನಾವು ಯಡಿಯೂರಪ್ಪರಿಂದ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ನಿಮ್ಮನ್ನ ಸಿಎಂ ಮಾಡಿದ್ದೆ ಈ 17 ಜನ. ನಿಮ್ಮ ಸಂಪುಟದಲ್ಲಿ ಎಲ್ಲರು ಇರಬೇಕು. ಮುಸ್ಲಿಂ ಕೂಡ ಇರಬೇಕು ಎಲ್ಲ ಜಾತಿ ಜನಾಂಗ ಇರಬೇಕು. ಆದ್ರೆ ಇಲ್ಲೆನಾಗಿದೆ. ನಾಡಿನಲ್ಲಿ ನಾಲಿಗೆಗೆ ತಪ್ಪದ ನಾಯಕ ಅಂತ ಬಿರುದು ಕೊಟ್ಟಿದ್ದು ನಾವೇ ಆದ್ರೆ ಅದೇಲ್ಲ ಏನಾಯ್ತು ಎಂದು ಹೆಚ್.ವಿಶ್ವನಾಥ್ ಕಿಡಿಕಾರಿದರು.

ಸಿಪಿ ಯೋಗೇಶ್ವರ್ ಗೆ ಯಾಕೆ ಮಂತ್ರಿಗಿರಿ.?

ವಿಧಾನಪರಿಷತ್ ಸದಸ್ಯ ಸಿ.ಪಿ ಯೊಗೇಶ್ವರ್ ಗೆ ಸಚಿವ ಸ್ಥಾನ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಯೋಗೇಶ್ವರ್ ಮಂತ್ರಿ ಆಗೋಕೆ ವಿಜಯೇಂದ್ರ ಕಾರಣ. ಅದೇ ರೀತಿ ಯಡಿಯೂರಪ್ಪರ ಪ್ರತಿಷ್ಠೆ, ಗಳಿಸಿದ ಗೌರವ ಡೆಮಾಲೀಷ್ ಆಗೋಕು ವಿಜಯೇಂದ್ರರೇ ಕಾರಣ ಎಂದು ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.

ಇಡೀ ವಿಧಾನಸೌಧದಲ್ಲಿ ಅವರ ಅಣ್ಣ ತಮ್ಮಂದಿರೇ ಕುಳಿತಿದ್ದಾರೆ. ಯಡಿಯೂರಪ್ಪ ಸಂಪಾದಿಸಿದ್ದ ಹೆಸರು ಹಾಳಾಗುತ್ತಿದೆ. ಎಲ್ಲದಕ್ಕೂ ಸುಮ್ಮನೆ ಹೈಕಮಾಂಡ್ ಹೆಸರು ಬಳಸಬೇಡಿ. ಕರ್ನಾಟಕಕ್ಕೆ ಯಡಿಯೂರಪ್ಪ ಅವರೇ ಹೈಕಮಾಂಡ್. ಯೋಗೇಶ್ವರ್ ದು ಟೋಟಲಿ ಬ್ಲಾಕ್ ಮೇಲ್ ತಂತ್ರ. ಅವರ ಬ್ಲಾಕ್ ಮೇಲ್ ಏನಂತ ಯಾವತ್ತಾದರೂ ಒಂದು ದಿನ ಹೊರಗೆ ಬರುತ್ತೆ ಎಂದರು.

ರಾಜ್ಯದಲ್ಲಿ ಸಚಿವರಾಗೋಕೆ ಬ್ಯಾಗ್ ಹಿಡಿದಕೊಳ್ಳೋದೆ ಮಾನದಂಡವೇ.?

ಮುನಿರತ್ನ ಬದಲು ಯೋಗೇಶ್ವರ್ ಯಾಕೇ ಸಚಿವ ಕೊಡ್ತೀರಾ ಹೇಳಿ. ಕೋರ್ಟ್ ಗೂ ನನಗೆ ಮಂತ್ರಿ ಸ್ಥಾನ ಕೊಡೋದಕ್ಕು ಸಂಬಂಧ ಇಲ್ಲ. ಆದರೆ ಆ ಸೈನಿಕನ ಮೇಲೆ 420 ಕೇಸ್ ಇದೆ. ಅವನಿಗೆ ಸಚಿವನನ್ನಾಗಿ ಮಾಡೋಕೆ ದುಂಬಾಲು ಬಿದ್ದಿದ್ದೀರಾ. ಯಾಕೇ ಎಲ್ಲಾದರೂ ಸಿಕ್ಕಿ ಹಾಕಿಕೊಂಡಿದ್ದೀರಾ ಹೇಳಿ. ಏನಾದರೂ ಬ್ಲಾಕ್ ಮೇಲ್ ಮಾಡುತ್ತಿದ್ದಾನಾ ಅವನು. ಅವನೇನು ರಾಜೀನಾಮೆ ಕೊಟ್ನಿದ್ನಾ. ಅಥವ ನೀವೆನು ಸೈನಿಕನ ಕೈಗೊಂಬೆ ಆಗಿದ್ದೀರಾ? ರಾಜ್ಯದಲ್ಲಿ ಸಚಿವರಾಗೋಕೆ ಬ್ಯಾಗ್ ಹಿಡಿದಕೊಳ್ಳೋದೆ ಮಾನದಂಡವೇ.? ಯೋಗೇಶ್ವರ್ ಗೆ ಬರಿ ಬಾಂಬೆಯಲ್ಲಿ ಬ್ಯಾಗ್ ಹಿಡಿದ್ದಿದ್ದು ಬಿಟ್ಟರೆ ಮತ್ತೇನು ಮಾಡಿಲ್ಲ. ಈ ಎಲ್ಲಾ ಬೆಳವಣಿಗೆಯಿಂದ ನೋವಾಗಿದೆ. ನಾವು ಮನುಷ್ಯರು ನಮಗೂ ಹೃದಯ ಇದೆ ನಮಗು ನೋವಾಗುತ್ತೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Related posts

ತ್ಯಾವರೆಕೊಪ್ಪ ಹುಲಿಸಿಂಹಧಾಮ ಮತ್ತಷ್ಟು ಆಕರ್ಷಣೀಯ ಪ್ರವಾಸಿ ಸ್ಥಳವಾಗಿ ಅಭಿವೃದ್ದಿ- ಸಂಸದ ಬಿ.ವೈ ರಾಘವೇಂದ್ರ ಭರವಸೆ…

Times fo Deenabandhu

ಐ.ಓ.ಟಿ ತಂತ್ರಜ್ಞಾನದ ಮೂಲಕ ಸ್ಮಾರ್ಟ್ ವಿಷಯಗಳನ್ನು ರೂಪಿಸಿ :ಎಸ್.ಎನ್. ನಾಗರಾಜ್

Times fo Deenabandhu

ಪಕ್ಷಿಗಳ ಸಾವು: ಶಿವಮೊಗ್ಗ ನಗರದಲ್ಲಿ ಹಕ್ಕಿ ಜ್ವರದ ಆತಂಕ…

Times fo Deenabandhu