January 21, 2021
Times of Deenabandhu
  • Home
  • ಮುಖ್ಯಾಂಶಗಳು
  • “ಅಂಗನವಾಡಿ ಕೇಂದ್ರಗಳ ತೆರೆಯುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಿ : ಸುಪ್ರೀಂ ಸೂಚನೆ
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜ್ಯ

“ಅಂಗನವಾಡಿ ಕೇಂದ್ರಗಳ ತೆರೆಯುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಿ : ಸುಪ್ರೀಂ ಸೂಚನೆ

ಬೆಂಗಳೂರು : ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಸಂಬಂಧ ಜನವರಿ 31ರ ಹೊತ್ತಿಗೆ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಸೂಕ್ಷ್ಮ ವಲಯಗಳನ್ನು ಹೊರತುಪಡಿಸಿ ದೇಶದ ಇತರ ಭಾಗಗಳಲ್ಲಿ ಅಂಗನವಾಡಿ ಆರಂಭಿಸುವ ಸಂಬಂಧ ಕ್ರಮಕೈಗೊಳ್ಳಿ ಎಂದು ಸೂಚಿಸಿದೆ.

ಕಳೆದ ಮಾರ್ಚ್ ತಿಂಗಳಲ್ಲಿ ಸ್ಥಗಿತಗೊಂಡ ಅಂಗನವಾಡಿಗಳ ಕಾರ್ಯನಿರ್ವಹಣೆ ಇನ್ನೂ ಆರಂಭಗೊಂಡಿಲ್ಲ. 6 ವರ್ಷದ ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ಇರುವ ಅಂಗನವಾಡಿ ಕೇಂದ್ರಗಳನ್ನು ಮತ್ತೆ ಆರಂಭಿಸಿ ಮಕ್ಕಳನ್ನು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯ ಎಂದು ಹೇಳಲಾಗಿದೆ.

ಇದೇ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿಯರಿಗೆ, ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿರುವ ತಾಯಿ-ಮಗುವಿಗೆ ಪೂರಕ ಆಹಾರ ಒದಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

Related posts

ನಾಳೆಯಿಂದ ಖಾಸಗಿ ಶಾಲೆಗಳಲ್ಲಿ ಆನ್ ಲೈನ್ , ಆಫ್ ಲೈನ್ ಕ್ಲಾಸ್ ಬಂದ್…

Times fo Deenabandhu

ಮುಂದಿನವಾರ ‘ಆಸ್ಟ್ರಾಝೆನೆಕಾ’ ಕೊರೋನಾ ಲಸಿಕೆ ಭಾರತದಲ್ಲಿ ಬಳಕೆಗೆ ಅನುಮತಿ ಸಾಧ್ಯತೆ…

Times fo Deenabandhu

ನೂತನ ಕೈಗಾರಿಕಾ ನೀತಿ ಸಮರ್ಪಕ ಅನುಷ್ಠಾನ: 20 ಲಕ್ಷ ಉದ್ಯೋಗ ಸೃಷ್ಠಿ….

Times fo Deenabandhu