Times of Deenabandhu
  • Home
  • ಮುಖ್ಯಾಂಶಗಳು
  • ಟೆಂಪೋ ಟ್ರಾವೆಲರ್ ಗೆ ಟಿಪ್ಪರ್ ಡಿಕ್ಕಿಯಾಗಿ ಭೀಕರ ಅಪಘಾತ: 11 ಮಂದಿ ಸಾವು…
ಕ್ರೈಮ್ ಮುಖ್ಯಾಂಶಗಳು ರಾಜ್ಯ

ಟೆಂಪೋ ಟ್ರಾವೆಲರ್ ಗೆ ಟಿಪ್ಪರ್ ಡಿಕ್ಕಿಯಾಗಿ ಭೀಕರ ಅಪಘಾತ: 11 ಮಂದಿ ಸಾವು…

ಧಾರವಾಡ: ಸಂಕ್ರಾಂತಿ ಹಬ್ಬದ ಮರುದಿನವೇ ಜವರಾಯ ಅಟ್ಟಹಾಸ ಮೆರೆದಿದ್ದು  ಟೆಂಪೋ ಟ್ರಾವೆಲರ್  ಗೆ ಟಿಪ್ಪರ್ ಡಿಕ್ಕಿಯಾಗಿ 11 ಮಂದಿ ಧಾರುಣ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡದ ಇಟ್ಟಿಗಟ್ಟಿ ಬಳಿ ರಾ.ಹೆ 4ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 9 ಮಹಿಳೆಯರು ಓರ್ವ ಬಾಲಕ ಸೇರಿ 11 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೃತಪಟ್ಟವರು ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದರು. ಈ ವೇಳೆ ಟಿಪ್ಪರ್ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಎಸ್ ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸಿಎಂ ಬಿಎಸ್ ವೈ ಅವರಿಗೆ ಅಭಿನಂದನಾ ಸಮಾರಂಭಕ್ಕೆ ನಮ್ಮ ಬೆಂಬಲವಿದೆ-ಸಿ.ಎಸ್.ಷಡಕ್ಷರಿ

Times fo Deenabandhu

ಪುದುಚೇರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ….

Times fo Deenabandhu

ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಅಸ್ವಸ್ಥ: ಆಸ್ಪತ್ರೆಗೆ ದಾಖಲು….

Times fo Deenabandhu