ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಜನವರಿ 26 ರಂದು ರೈತರು ಹಮ್ಮಿಕೊಂಡಿರುವ ಟ್ರ್ಯಾಕ್ಟರ್ ರ್ಯಾಲಿ ಬಗ್ಗೆ ಯಾವುದೇ ಆದೇಶ ನೀಡುವುದಿಲ್ಲ. ಈ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟನೆ ನೀಡಿದೆ.
ಜನವರಿ 26ರಂದು ರೈತರು ಟ್ರಾಕ್ಟರ್ ರ್ಯಾಲಿಗೆ ತಡೆ ನೀಡುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ಖಂಡಿಸಿ ರೈತರು ಜನವರಿ 26 ರಂದು ಹಮ್ಮಿಕೊಂಡಿರುವ ಟ್ರ್ಯಾಕ್ಟರ್ ರ್ಯಾಲಿ ಬಗ್ಗೆ ಯಾವುದೇ ಆದೇಶ ನೀಡುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ನಾವು ಮಧ್ಯ ಪ್ರವೇಶಿಸಲ್ಲ. ಪೊಲೀಸರಿಗೆ ಕ್ರಮ ಕೈಗೊಳ್ಳುವ ಸಂಪೂರ್ಣ ಅಧಿಕಾರವಿದೆ ಎಂದು ತಿಳಿಸಿದೆ.
ಈ ಮೂಲಕ ರೈತರ ಹೋರಾಟದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಕೇಂದ್ರ ಸರ್ಕಾರದ ನೂತನ ಕಾಯ್ದೆಗಳನ್ನ ವಿರೋಧಿಸಿ ಜನವರಿ 26 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ನವದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಲು ರೈತ ಸಂಘಟನೆಗಳು ಭಾರಿ ಸಿದ್ಧತೆ ನಡೆಸಿವೆ.
ಪಂಜಾಬ್ ನ ಗ್ರಾಮೀಣ ಭಾಗದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಮಾಡಿ, ಜ. 26 ರ ಬೃಹತ್ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತಿದ್ದಾರೆ. ನವನಶಹರ, ಗುರುದಾಸಪುರ ಮುಂತಾದೆಡೆ ರ್ಯಾಲಿ ನಡೆಸಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.
ಪ್ರತಿ ಊರಿನಿಂದ 5 ರಿಂದ 10 ಕೆಲವೆಡೆಯಿಂದ 50 ಟ್ರಾಕ್ಟರ್ ಗಳು ಬರುವ ನಿರೀಕ್ಷೆ ಇದೆ ಎಂದು ಭಾರತೀಯ ಕಿಸಾನ್ ಸಂಘದ ಸಂಘಟನಾ ಕಾರ್ಯದರ್ಶಿ ಸುಖದೇವ ಸಿಂಘ್ ಕೊಕ್ರಿಕಾಲನ್ ತಿಳಿಸಿದ್ದಾರೆ.
[20/01, 3:55 pm] Prashanth: ಜ.26ರ ‘ಟ್ರ್ಯಾಕ್ಟರ್ ರ್ಯಾ ಲಿ‘ಗೆ ತಡೆಯಾಜ್ಞೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆದಿದೆ. ‘ಗಣರಾಜ್ಯೋತ್ಸವದಂದು ರೈತ ಸಂಘಟನೆ ಕರೆ ನೀಡಿರುವ ಟ್ರ್ಯಾಕ್ಟರ್ ರ್ಯಾ ಲಿ ವಿಚಾರ ಪೊಲೀಸರು ಇತ್ಯರ್ಥಪಡಿಸಬೇಕು‘ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನೊಳಗೊಂಡ ಪೀಠ ಹೇಳಿತು.
ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಪೀಠ, ‘ಈ ರ್ಯಾ ಲಿ ವಿಷಯಕ್ಕೆ ಸಂಬಂಧಿಸಿದಂತೆ ನಾವು ಯಾವುದೇ ನಿರ್ದೇಶನ ನೀಡುವುದಿಲ್ಲ. ಇದು ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿಷಯವಾಗಿದೆ. ನೀವು ಅರ್ಜಿಯನ್ನು ಹಿಂದೆತೆಗೆದುಕೊಳ್ಳಲು ಅವಕಾಶ ನೀಡುತ್ತೇವೆ‘ ಎಂದು ತಿಳಿಸಿತು. ಬಳಿಕ ರ್ಯಾ ಲಿಗೆ ತಡೆಯಾಜ್ಞೆ ನೀಡುವಂತೆ ಕೋರಿ ದೆಹಲಿ ಪೊಲೀಸರ ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.
