Times of Deenabandhu
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ

2ನೇ ಹಂತದಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂಗಳಿಗೆ ಕೊರೋನಾ ಲಸಿಕೆ…

ನವದೆಹಲಿ: ದೇಶಾದ್ಯಂತ ಕೋವಿಡ್-19 ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ಈಗಾಗಲೇ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಕೊರೋನಾ ಲಸಿಕೆ ನೀಡಲಾಗಿದೆ. ವಿವಿಧ ಕ್ಷೇತ್ರಗಳ ಕರೊನಾ ವಾರಿಯರ್ಸ್ ಸೇರಿದಂತೆ ಹಲವಾರು ಮಂದಿ ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.

ಇದೀಗ ಎರಡನೆಯ ಹಂತವೂ ಶೀಘ್ರದಲ್ಲಿ ಶುರುವಾಗಲಿದ್ದು, . ಈ ಹಂತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಲಸಿಕೆ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಲಸಿಕೆಯನ್ನು ಪುಣೆಯ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸುತ್ತಿದೆ. ಕೋವ್ಯಾಕ್ಸಿನ್’ ಲಸಿಕೆಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದ್‌ನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದೆ.

ಎರಡನೇ ಹಂತದ ಲಸಿಕೆ ಅಭಿಯಾನದಲ್ಲಿ 50 ವರ್ಷಕ್ಕಿಂತ ಮೇಲಿನ ಎಲ್ಲ ನಾಗರಿಕರಿಗೆ, 50 ವರ್ಷ ಮೇಲ್ಪಟ್ಟ ಎಲ್ಲ ಸಂಸದರು ಹಾಗೂ ಶಾಸಕರಿಗೆ ಲಸಿಕೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Related posts

ರಾಜ್ಯ ವಿಧಾನಮಂಡಲ ಅಧಿವೇಶನ ನಾಲ್ಕೇ ದಿನಕ್ಕೆ ಮೊಟಕುಗೊಳಿಸಲು ನಿರ್ಧಾರ…

Times fo Deenabandhu

ಮಳೆಯಿಂದ ಬೆಳೆ ಹಾನಿಗೊಳಗಾದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ, ಬಗಾದಿ ಗೌತಮ್ ಭೇಟಿ ಪರಿಶೀಲನೆ..

Times fo Deenabandhu

ದೆಹಲಿಯಲ್ಲಿ ಪ್ರತಿಭಟನಾನಿರತ ರೈತರಿಂದ ನ.26 ರಂದು ಟ್ರ್ಯಾಕ್ಟರ್ ಪರೇಡ್ ಗೆ ನಿರ್ಧಾರ…

Times fo Deenabandhu