ಬೆಂಗಳೂರು : ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕ ಪರೀಕ್ಷೆ ದಿಢೀರ್ ಮಂದೂಡಿಕೆ ಮಾಡಲಾಗಿದೆ.
ಈ ಕುರಿತು ಕೆಪಿಎಸ್ ಸಿ ಆದೇಶ ಹೊರಡಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಏಕಾಏಕಿ ಮುಂದೂಡಲಾಗಿದೆ. ರಾಜ್ಯದಲ್ಲಿ 1,100 ಹುದ್ದೆಗಳಿಗೆ ಸುಮಾರು 3.74 ಲಕ್ಷಕ್ಕೂ ಅಧಿಕ ಜನರು ನಾಳೆ ಪರೀಕ್ಷೆ ಬರೆಯಬೇಕಿತ್ತು.
ಪ್ರಶ್ನಪತ್ರಿಕೆ ಸೋರಿಕೆ ಸಂಬಂಧ ಬೆಂಗಳೂರು ಪೊಲೀಸರು 6 ಜನರನ್ನು ಬಂಧಿಸಿದ್ದು, ಸುಮಾರು 6 ಲಕ್ಷ ರೂ.ನಗದು ಸಹಿತ ಪ್ರಶ್ನೆ ಪತ್ರಿಕೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ತನಿಖೆ ಪ್ರಗತಿಯಲ್ಲಿದೆ ಎಂದು ಪೋಲಿಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
