ಚಿಕ್ಕಮಗಳೂರು: ಕೇಂದ್ರ ಸರ್ಕಾರ ಮೂರು ಕೃಷಿ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿ ಹಾಗೂ ಬೆಂಗಳೂರಿನ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಇಂದು ಜಿಲ್ಲಾ ದಲಿತರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಜಾದ್ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿತು.
ನಂತರ ಮಾತನಾಡಿದ ಒಕ್ಕೂಟದ ಪದಾಧಿಕಾರಿಗಳು ದೆಹಲಿಯಲ್ಲಿ ನಡೆಯುತ್ತಿರುವ ಸುಮಾರು ಮೂರು ತಿಂಗಳ ಕಾಲ ಪ್ರತಿಭಟನೆಗೆ ಬೆಂಬಲಿಸಿ ಹಾಗೂ ನಾಳೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಟ್ರ್ಯಾಕ್ಟರ್ ರ್ಯಾಲಿ ಹೋರಾಟಕ್ಕೆ ಬೆಂಬಲ ಸೂಚಿಸಿ ಜಿಲ್ಲಾ ಒಕ್ಕೂಟದಿಂದ ವತಿಯಿಂದ ಬೆಂಗಳೂರಿಗೆ ಸುಮಾರು 100 ಮಂದಿ ಕಾರ್ಯಕರ್ತರು ಈ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷರಾದ ಮಂಜುನಾಥ್ ಕೂದುವಳ್ಳಿ, ಕೆ.ಎನ್.ಉದ್ದಪ್ಪ, ಕಾರ್ಯದರ್ಶಿ ಉಮೇಶ್ಕುಮಾರ್ ಮತ್ತಿತರ ಕಾರ್ಯಕರ್ತರು ಉಪಸ್ಥಿತರಿದ್ದರು.
