Times of Deenabandhu
  • Home
  • ಮುಖ್ಯಾಂಶಗಳು
  • ಹಠಮಾರಿ ಧೋರಣೆ ಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡಿ-ಕೇಂದ್ರಕ್ಕೆ ಹೆಚ್ ಡಿಕೆ ಸಲಹೆ……
ಪ್ರಧಾನ ಸುದ್ದಿ ಮುಖ್ಯಾಂಶಗಳು ರಾಜಕೀಯ ರಾಜ್ಯ

ಹಠಮಾರಿ ಧೋರಣೆ ಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡಿ-ಕೇಂದ್ರಕ್ಕೆ ಹೆಚ್ ಡಿಕೆ ಸಲಹೆ……

ಬೆಂಗಳೂರು: ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು. ರೈತರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ಸಲಹೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವಿಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ,  ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸ ಲೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು. ಕೇಂದ್ರ ಸರ್ಕಾರ ಹಠಮಾರಿ ಧೋರಣೆ ಕೈಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನು ತೋರಬೇಕು ಎಂದು ಸಲಹೆ ನೀಡಿದ್ದಾರೆ.

ರೈತರ ಸಮಸ್ಯೆಗಳ ಪರಿಹಾರಕ್ಕೆ ನಡೆಯುವ ಹೋರಾಟಕ್ಕೆ ಜೆಡಿಎಸ್ ಸದಾ ಬೆಂಬಲ ನೀಡುತ್ತಿದೆ. ರೈತರ ಅಭ್ಯುದಯಕ್ಕಾಗಿ ದುಡಿದ ಮತ್ತು ದುಡಿಯುವ ಏಕೈಕ ಪಕ್ಷವೆಂದರೆ ಅದು ಜೆಡಿಎಸ್.

ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ರಾಜ್ಯದಲ್ಲಿ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾದರೆ ಅದಕ್ಕೆ ತಕ್ಕ ಪಾಠ ಕಲಿಯಬೇಕಾಗುತ್ತದೆ. ರೈತರ ಶಾಂತಿಯುತ ಪ್ರತಿಭಟನೆಗೆ ರಾಜ್ಯ ಸರ್ಕಾರ ಅನುಕೂಲ ಮಾಡಿಕೊಡಬೇಕು.

ರೈತ ಕ್ರಾಂತಿಯ ಹೋರಾಟದ ಕಿಚ್ಚಿಗೆ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಅದಕ್ಕೆ ರೈತರು ಬಲಿಯಾಗಬಾರದು ಎಂಬುದು ನನ್ನ ಕಿವಿಮಾತು ಎಂದು ಟ್ವಟ್ಟರ್ ನಲ್ಲಿ ಹೆಚ್.ಡಿಕೆ ತಿಳಿಸಿದ್ದಾರೆ.

ಹಾಗೆಯೇ ಸಂಕಷ್ಟಕ್ಕೆ ಸಿಲುಕಿದ ರೈತರ ಕ್ರಾಂತಿಯ ಹೋರಾಟಕ್ಕೆ  ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ. ರೈತ ಕ್ರಾಂತಿಯನ್ನು ಹಾದಿ ತಪ್ಪಿಸುವ ಹುನ್ನಾರಗಳಿಗೆ  ಮಣಿಯದಿದ್ದರೆ ನೈಜ ಕಳಕಳಿಯ ಹೋರಾಟ ತಾರ್ಕಿಕ  ಅಂತ್ಯ ಕಂಡು ಗೆಲವು ಆಗುತ್ತದೆ ಎಂಬುದು ಪ್ರಾಮಾಣಿಕ ಅನಿಸಿಕೆ ಎಂದು ಹೆಚ್.ಡಿಕೆ ತಿಳಿಸಿದ್ದಾರೆ.

Related posts

ಆಯುಷ್ ಫೆಡರೇಷನ್ ಆಫ್ ಇಂಡಿಯಾದ ಜಿಲ್ಲಾ ಆಯುಷ್ ವೈದ್ಯರಿಂದ ಪ್ರತಿಭಟನೆ: ಮನವಿ ಸಲ್ಲಿಕೆ

Times fo Deenabandhu

ನಾನು ಹಠ ಹಿಡಿದು ಕೂತಿದ್ರೆ ಕುಮಾರಸ್ವಾಮಿ ಸಿಎಂ ಆಗ್ತಿದ್ನಾ..? ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ….

Times fo Deenabandhu

ಅಮೇರಿಕಾ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕೃತ ಆಯ್ಕೆ: ಜ.20 ರಂದು ಪದಗ್ರಹಣ…

Times fo Deenabandhu