January 21, 2021
Times of Deenabandhu
  • Home
  • Monthly Archives: January 2021

Month : January 2021

ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

2021ನೇ ಸಾಲಿನ ಮಾಂಸ ರಹಿತ ದಿನಗಳ ಪಟ್ಟಿ ಪ್ರಕಟ/ಜ. 23 ಮತ್ತು 24 ರಂದು ವಿದ್ಯುತ್ ವ್ಯತ್ಯಯ : ಸಹಕರಿಸಲು ಮನವಿ

Times fo Deenabandhu
2021ನೇ ಸಾಲಿನ ಮಾಂಸ ರಹಿತ ದಿನಗಳ ಪಟ್ಟಿ ಪ್ರಕಟ ಶಿವಮೊಗ್ಗ : ಶಿವಮೊಗ್ಗ ಮಹಾನಗರಪಾಲಿಕೆಯು 2021ನೇ ಸಾಲಿನಲ್ಲಿ ಕೆಳಕಂಡ ದಿನಾಂಕಗಳಂದು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮಾಂಸ ರಹಿತ ದಿನಗಳೆಂದು ಘೋಷಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರು
ಚಿಕ್ಕಮಗಳೂರು ಜಿಲ್ಲೆ ಮುಖ್ಯಾಂಶಗಳು

ಚಿಕ್ಕಮಗಳೂರು ಜಿಲ್ಲೆಗೆ ಕಂದಾಯ ಸಚಿವರು, ಜಲ ಸಂಪನ್ಮೂಲ ಸಚಿವರ ಪ್ರವಾಸ/ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ/ವಿಜ್ಞಾನ ಸಾಹಿತ್ಯ ಕಮ್ಮಟ

Times fo Deenabandhu
ಕಂದಾಯ ಸಚಿವರ ಪ್ರವಾಸ ಚಿಕ್ಕಮಗಳೂರು,:- ಮಾನ್ಯ ಕಂದಾಯ ಸಚಿವ ಆರ್.ಅಶೋಕ ಅವರು ಜನವರಿ ೨೪ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ ೨೪ ರಂದು ಮಧ್ಯಾಹ್ನ ೧೨.೩೦ ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸುವರು, ನಂತರ ಮಧ್ಯಾಹ್ನ
ದೇಶ ಪ್ರಧಾನ ಸುದ್ದಿ ಮುಖ್ಯಾಂಶಗಳು

ಕೋವಿಶೀಲ್ಡ್ ಲಸಿಕೆ ಉತ್ಪಾದನಾ ಕೇಂದ್ರ ಸೆರಮ್ ಇನ್ಸ್ ಟಿಟ್ಯೂಟ್  ನಲ್ಲಿ ಅಗ್ನಿ ಅವಘಡ….

Times fo Deenabandhu
ಪುಣೆ: ಕೊರೋನಾ ಲಸಿಕೆ ಉತ್ಪಾದನಾ ಕೇಂದ್ರವಾದ ಸೆರಮ್ ಇನ್ಸಿಟ್ಯೂಟ್ ಆಫ್ ಇಂಡಿಯಾದಲ್ಲಿ ಅಗ್ನಿ ಅವಘಡ  ಸಂಭವಿಸಿದ್ದು 10 ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.   ಪುಣೆಯಲ್ಲಿರುವ  ಸೆರಮ್
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ವಾಲಿಬಾಲ್ ಪಂದ್ಯಾವಳಿ:ಯುನೈಟೆಡ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ಗೆ ಪ್ರಥಮ ಸ್ಥಾನ

Times fo Deenabandhu
ಶಿವಮೊಗ್ಗ : ಗೋಪಾಲಗೌಡ ಬಡಾವಣೆಯಲ್ಲಿ ಇತ್ತೀಚೆಗೆ ಶ್ರೀ ಮೃತ್ಯುಂಜಯ ಯುವಕರ ಸಂಘ ಆಯೋಜಿಸಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಯುನೈಟೆಡ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ಪ್ರಥಮ ಸ್ಥಾನ ಪಡೆಯಿತು. ಜಿಲ್ಲಾ ಉಸ್ತುವಾರಿ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ/ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ/ವಿಜ್ಞಾನ ಸಾಹಿತ್ಯ ಕಮ್ಮಟಕ್ಕೆ  ಅರ್ಜಿ ಆಹ್ವಾನ

Times fo Deenabandhu
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ ಶಿವಮೊಗ್ಗ,: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಜನವರಿ 25 ರಂದು ಏ.S.ಕಿ.ಂ.ಂ. ವತಿಯಿಂದ ನಡೆಯಲಿರುವ  ಓಖಿSಇ-ಓಒಒS ಪರೀಕ್ಷೆಯನ್ನು ಜಿಲ್ಲೆಯ ಎಲ್ಲಾ 7 ತಾಲೂಕು ಕೇಂದ್ರಗಳಲ್ಲಿನ ಒಟ್ಟು 27
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಸಾಮಾಜಿಕ ಕಳಕಳಿ ಹೊಂದಿದ್ದ ಮಹಾನ್ ವ್ಯಕ್ತಿತ್ವ ಅಂಬಿಗರ ಚೌಡಯ್ಯ- ಸುವರ್ಣ ಶಂಕರ್

Times fo Deenabandhu
 ಶಿವಮೊಗ್ಗ : 12ನೇ ಶತಮಾನದಲ್ಲಿ ಜೀವಿಸಿದ್ದ ಶಿವಶರಣರು ಹಾಗೂ ವಚನಕಾರರ ಅಂಬಿಗರ ಚೌಡಯ್ಯ. ಇವರು ಸಾಮಾಜಿಕ ಕಳಕಳಿ ಹೊಂದಿದ್ದು, ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನಗಳನ್ನು ನೀಡಿದ ಮಹಾನ್ ವ್ಯಕ್ತಿತ್ವ ಎಂದು ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ಪೋಕ್ಸೋ ಕಾಯ್ದೆಯಡಿ ಪ್ರಕರಣಗಳು ದಾಖಲಾಗುತ್ತಿರುವುದು ವಿಷಾದದ ಸಂಗತಿ -ಬಿ.ಜಯಂತಕುಮಾರ್​

Times fo Deenabandhu
 ಶಿವಮೊಗ್ಗ: ಪೋಕ್ಸೋ ಕಾಯ್ದೆಯಡಿಯಲ್ಲಿ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚಿನ ಪ್ರಕರಣಗಳು ದಾಖಲಾಗಿರುವುದು ವಿಷಾಧದ ಸಂಗತಿ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಯಂತಕುಮಾರ್ ಅವರು ಹೇಳಿದರು. ಅವರು ಇಂದು ಜಿಲ್ಲಾ ಕಾನೂನು ಸೇವೆಗಳ
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ನಗರಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

Times fo Deenabandhu
ಶಿವಮೊಗ್ಗ:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನವರಿ 23 ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 2.30 ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿರುವ ಅವರು ಮಧ್ಯಾಹ್ನ 3.45 ಕ್ಕೆ ಶಿವಮೊಗ್ಗದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಸಂಜೆ 7.30 ಕ್ಕೆ ನಗರದ ಪ್ರೇರಣಾ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರ ಪುತ್ರ ಆಯನೂರು ಸಂತೋಷ್ ಮತ್ತು ಲಾವಣ್ಯ ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಶಿವಮೊಗ್ಗದಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ, ಜನವರಿ 24 ರಂದು ಬೆಳಗ್ಗೆ 9 ಗಂಟೆಗೆ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ವಿದ್ಯಾರ್ಥಿನಿಯರಿಗೆ  ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಪ್ರತಿಭಟನೆ…

Times fo Deenabandhu
ಶಿವಮೊಗ್ಗ: ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೆ ಕೂಡಲೇ ಹಾಸ್ಟೆಲ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಇಂದು ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕುವೆಂಪು ವಿವಿ ಕುಲಪತಿಯವರಿಗೆ ಮನವಿ ಸಲ್ಲಿಸಿದರು. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮರ್ಪಕ ಹಾಸ್ಟೆಲ್ ಸೌಲಭ್ಯ ಇಲ್ಲದೆ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ವಿದ್ಯಾರ್ಥಿನಿಯರಿಗೂ ಹಾಸ್ಟೆಲ್ ಸೌಲಭ್ಯ ನೀಡುತ್ತಿಲ್ಲ. ಅಲ್ಲದೆ ಶಿಫಾರಸ್ಸು ಇರುವ ವಿದ್ಯಾರ್ಥಿನಿಯರಿಗೆ ಮಾತ್ರ ಹಾಸ್ಟೆಲ್ ಗೆ ಅವಕಾಶ ನೀಡಲಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿನಿಯರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್ ನಲ್ಲಿ ಕೇವಲ 100 ಕಿ.ಮೀ. ದೂರ ಇರುವ ವಿದ್ಯಾರ್ಥಿನಿಯರಿಗೆ ಆದ್ಯತೆ ನೀಡುತ್ತಿದ್ದು, 100 ಕಿ.ಮಿ. ಕಡಿಮೆ ಇರುವ ಬಡ, ಮಧ್ಯಮ ವರ್ಗದ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಅವಕಾಶ ನೀಡುತ್ತಿಲ್ಲ ಇದರಿಂದ ಬಡ ಕುಟುಂಬದ ವಿದ್ಯಾರ್ಥಿನಿಯರು ಕಾಲೇಜು ತರಗತಿಯಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು. ಹಾಸ್ಟೆಲ್ ಸೌಲಭ್ಯ ಒದಗಿಸಲು ವಿದ್ಯಾರ್ಥಿನಿಯರಿಂದ 6500 ರೂ. ಮುಂಗಡ ಸ್ವೀಕರಿಸಿದ್ದು, ಈ ವರ್ಷವೂ ಸ್ವೀಕರಿಸಲಾಗುತ್ತಿದೆ. ಕಳೆದ ವರ್ಷ ಪಾವತಿ ಮಾಡಿದ್ದ ವಿದ್ಯಾರ್ಥಿನಿಯರಿಗೆ ಕೇವಲ 1500 ರೂ. ಹಿಂದಿರುಗಿಸಲಾಗುತ್ತಿದೆ. ಇನ್ನೂಳಿದ ಹಣಕ್ಕೆ ಉತ್ತರ ನೀಡುತ್ತಿಲ್ಲ ಎಂದು ದೂರಿದರು. ಕಾಲೇಜಿನಲ್ಲಿ ಸೂಕ್ತವಾದ ಲ್ಯಾಬ್ ವ್ಯವಸ್ಥೆಯಿಲ್ಲ. ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು ಆಡಳಿತ ಮಂಡಳಿಯು ಸರಿಯಾಗಿ ಸ್ಪಂದಿಸುತ್ತಿಲ್ಲ. ಕಾಲೇಜು ಹಾಗೂ ಹಾಸ್ಟಲ್‍ಗಳಲ್ಲಿ ವಿದ್ಯಾರ್ಥಿನಿಯರಿಗೆ ಆಗುತ್ತಿರುವ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಪ್ರತಿಭಟನೆಯಲ್ಲಿ ಎನ್‍ಎಸ್‍ಯುಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಜಿಲ್ಲಾಧ್ಯಕ್ಷ ಹೆಚ್.ಎಸ್.ಬಾಲಾಜಿ, ರವಿ, ವಿಜಯ್, ರವಿಕುಮಾರ್, ಮನೋಜ್, ಶಬರೀಶ್, ಗಣೇಶ್ ಸಂಜಯ್, ಕಿರಣ್ ಇನ್ನಿತರರು ಭಾಗವಹಿಸಿದ್ದರು.
ಜಿಲ್ಲೆ ಮುಖ್ಯಾಂಶಗಳು ಶಿವಮೊಗ್ಗ

ರೈತ ವಿರೋಧಿ ಕಾಯ್ದೆ ಹಿಂಪಡೆಯಬೇಕೆಂದು ಆಗ್ರಹ: ಜ.26 ರಂದು ಬೃಹತ್ ಜನಗಣರಾಜ್ಯೋತ್ಸವ ಪೆರೇಡ್

Times fo Deenabandhu
ಶಿವಮೊಗ್ಗ: ರೈತ ಮತ್ತು ಕಾರ್ಮಿಕ ವಿರೋಧಿಯಾಗಿರುವ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ಜ.26 ರಂದು ಬೆಂಗಳೂರಿನಲ್ಲಿ ಬೃಹತ್ ಜನಗಣರಾಜ್ಯೋತ್ಸವ ಪೆರೇಡ್ ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದರು. ಇಂದಿಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ದೇಶದ್ರೋಹಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ಕಳೆದ 58 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು 500ಕ್ಕೂ ರೈತ ಸಂಘಟನೆಗಳು ಚಾರಿತ್ರಿಕ ಹೋರಾಟವನ್ನು ನಡೆಸುತ್ತಿವೆ. ಈ ಹೋರಾಟವನ್ನು ಬೆಂಬಲಿಸಿ ಬೆಂಗಳೂರಿನಲ್ಲಿ ಪೆರೇಡ್ ನಡೆಸಲು ತೀರ್ಮಾನಿಸಲಾಗಿದೆ. ಈ ಹೋರಾಟವು ಎರಡನೇ ಸ್ವಾತಂತ್ರ್ಯ ಚಳವಳಿಯಾಗಿದ್ದು, ಭರತ ಖಂಡದಲ್ಲಿ ಸಾಕ್ಷಿಯಾಗಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ರೈತರ ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ರಾಜ್ಯದ ಎಲ್ಲಾ ರೈತ ಸಂಘಗಳು, ದಲಿತ ಸಂಘರ್ಷಸಮಿತಿಗಳು, ಕರ್ನಾಟಕ ಜನಶಕ್ತಿ ವೇದಿಕೆ, ಪ್ರಗತಿಪರ ಸಂಘಟನೆಗಳು, ಬರಹಗಾರರು, ಸಾಹಿತಿಗಳು ಬೆಂಬಲಿಸಿ ಭಾಗವಹಿಸಲಿದ್ದಾರೆ ಎಂದರು. ಸರ್ಕಾರಿ ಕಾರ್ಯಕ್ರಮ ಮುಗಿದ ನಂತರ ಬೆಂಗಳೂರಿನ ರಾಜಮಾರ್ಗಗಳಲ್ಲಿ ರೈತರು ಟ್ಯಾಕ್ಟರ್, ಎತ್ತಿನ ಗಾಡಿ ಮತ್ತು ವಾಹನಗಳ ಮೂಲಕ ಪೆರೇಡ್ ನಡೆಸಲಿದ್ದು, ವಾಹನಗಳ ಮೇಲೆ ರಾಷ್ಟ್ರ ಧ್ವಜ, ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಧ್ವಜಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. ಸುಮಾರು 25-30 ಸಾವಿರ ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದು, ಶಿವಮೊಗ್ಗ ಜಿಲ್ಲೆಯಿಂದ ನೂರಾರು ವಾಹನಗಳಲ್ಲಿ 1000 ಜನರು ಚಳವಳಿಯಲ್ಲಿ ಭಾಗವಹಿಸಲಿದ್ದಾರೆ. ಕಾಯ್ದೆಗಳು ಸಂಪೂರ್ಣವಾಗಿ ರದ್ದಾಗುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಬಸವರಾಜಪ್ಪ ತಿಳಿಸಿದರು. ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್.ಅಶೋಕ್  ಮಾತನಾಡಿ, ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯಲ್ಲಿ ಇಲ್ಲಿಯವರೆಗೆ 138 ರೈತರು ಹುತಾತ್ಮರಾಗಿದ್ದಾರೆ ಎಂದು ರೈತ ಸಂಘಟನೆಗಳ ವೇದಿಕೆಯಾಗಿರುವ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಇಷ್ಟು ರೈತರು ಹುತಾತ್ಮರಾಗಿದ್ದರೂ ಸಹ ಕೇಂದ್ರ ಸರ್ಕಾರ ದೇಶದ್ರೋಹಿ ಕಾಯ್ದೆಗಳನ್ನು ಹಿಂಪಡೆಯದೆ ಹಠಮಾರಿ ಧೋರಣೆ ಅನುಸರಿಸುತ್ತಿದೆ ಆಕ್ರೋಶ ವ್ಯಕ್ತಪಡಿಸಿದರು. ಜ.26ರಂದು ತುಮಕೂರು ರಸ್ತೆ ನೈಸ್ ಜಂಕ್ಷನ್‍ನಿಂದ, ಕೆ.ಆರ್.ಪುರಂ, ಕೆಂಗೇರಿ ಹಾಗೂ ಸಂಗೋಳ್ಳಿ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೂ ಜಾಥಾ ನಡೆಯಲಿದೆ ತಿಳಿಸಿದರು. ಚಿಂತಕ ಪ್ರೊ. ರಾಜೇಂದ್ರ ಚೆನ್ನಿ ಮಾತನಾಡಿ, ನ್ಯಾಯ ಕೇಳಲು ನ್ಯಾಯಾಲಯಕ್ಕೆ ಹೋಗದಂತಹ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತರುತ್ತಿದ್ದು, ಈ ಕಾನೂನುಗಳು ಶ್ರೀಮಂತರ  ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವಂತಿವೆ. ರೈತರು ನಡೆಸುತ್ತಿರುವ ಹೋರಾಟಕ್ಕೆ ಮನುಷ್ಯರಾದವರು ಬೆಂಬಲಿಸಬೇಕೆಂದು ಮನವಿ ಮಾಡಿಕೊಂಡರು. ಸುದ್ದಿಗೋಷ್ಟಿಯಲ್ಲಿ ಡಿಎಸ್‍ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಹೆಚ್.ಹಾಲೇಶಪ್ಪ, ಎಸ್.ಶಿವಮೂರ್ತಿ, ಪ್ರಗತಿಪರ ಹೋರಾಟಗಾರರಾದ ಟಿ. ಅನಿಲ್‍ಕುಮಾರ್, ಡಿ.ಮಂಜುನಾಥ್, ಡಿ.ಎಸ್.ಶಿವಕುಮಾರ್ ಉಪಸ್ಥಿತರಿದ್ದರು.